ಶ್ರೀನಿವಾಸ್ ಪ್ರಸಾದ್ ಇಂದು ಬಿಜೆಪಿಗೆ!

ಸೋಮವಾರ, 2 ಜನವರಿ 2017 (11:12 IST)
ಕಾಂಗ್ರೆಸ್ ಪಕ್ಷ ತೊರೆದಿರುವ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರು ಇಂದು ಅಧಿಕೃತವಾಗಿ ಬಿಜೆಪಿ ಪಕ್ಷ ಸೇರಲಿದ್ದಾರೆ. 
 
ಇಂದು ಬಿಜೆಪಿ ಕಚೇರಿಯಲ್ಲಿ ನಡೆಯುವ ಸರಳ ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಪಕ್ಷದ ಹಿರಿಯ ನಾಯಕರು ಸಮ್ಮುಖದಲ್ಲಿ ಶ್ರೀನಿವಾಸ್ ಪ್ರಸಾದ್ ಬಿಜೆಪಿ ಸೇರಲಿದ್ದಾರೆ. 
 
ತಮ್ಮನ್ನು ಸಚಿವ ಸಂಪುಟದಿಂದ ಕೈಬಿಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಂಡೆದ್ದ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರು, ಕಾಂಗ್ರೆಸ್ ಪಕ್ಷದಿಂದ ನಿರ್ಗಮಿಸಿದ್ದಲ್ಲದೆ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಿದ್ದರು. ರಾಜೀನಾಮೆ ಬೆನ್ನೆಲೇ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಪ್ರಸಾದ್‌ರನ್ನು ಸೇಳೆಯಲು ಕಸರತ್ತು ನಡೆಸಿದ್ದರು. ಆದರೆ, ಅಂತಿಮವಾಗಿ ಬಿಜೆಪಿ ಸೇರ್ಪಡೆಯಾಗುವ ನಿರ್ಧಾರ ಕೈಗೊಂಡಿದ್ದಾರೆ.
 
ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರು ಬಿಜೆಪಿ ಪಕ್ಷ ಸೇರುವುದರಿಂದ ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಸಮರ್ಥ ದಲಿತ ನಾಯಕರ ಕೊರತೆ ನೀಗಿಸಬಹುದು ಎಂದು ಬಿಜೆಪಿ ನಾಯಕರು ಅಭಿಪ್ರಾಯಪಟ್ಟಿದ್ದಾರೆ.

ವೆಬ್ದುನಿಯಾವನ್ನು ಓದಿ