ಇಂದು, ನಾಳೆ ಬೆಂಗಳೂರಿಗರಿಗೆ ಹವಾಮಾನ ಇಲಾಖೆ ಎಚ್ಚರಿಕೆ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಬೆಳ್ಳಂ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆಯಿದೆ.
ಇಂದು ಮತ್ತು ನಾಳೆ ಇದೇ ವಾತಾವರಣವಿರಲಿದ್ದು, ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಈ ಅಕಾಲಿಕ ವಾತಾವರಣದಿಂದಾಗಿ ಸಾಮಾನ್ಯ ಜನರು ಪರದಾಡುವಂತಾಗಿದೆ.