ರಾಜ್ಯದಲ್ಲಿ ಮುಂದುವರಿದ ರೈತರ ಆತ್ಮಹತ್ಯೆ: ಇಂದು ಇಬ್ಬರು ಅನ್ನದಾತರು ಕಣ್ಮರೆ

ಭಾನುವಾರ, 26 ಜುಲೈ 2015 (13:02 IST)
ರಾಜ್ಯದಲ್ಲಿ ಇಂದೂ ಕೂಡ ರೈತರ ಆತ್ಮಹತ್ಯೆ ಮುಂದುವರಿದಿದ್ದು, ಚಿಕ್ಕಮಗಳೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 
 
ಆತ್ಮಹತ್ಯೆ ಮಾಡಿಕೊಂಡ ರೈತನನ್ನು ಚಿಕ್ಕಮಗಳೂರಿನ ಕಡೂರು ತಾಲೂಕಿನ ಹುನ್ನೇನಹಳ್ಳಿ ಗ್ರಾಮದ ನಿವಾಸಿ ತಿಮ್ಮಪ್ಪ(55) ಎಂದು ತಿಳಿದು ಬಂದಿದ್ದು, ಈತ ತನ್ನ ತೆಂಗಿನ ಬೆಳೆಗಾಗಿ ಇತ್ತೀಚೆಗೆ ಕೊಳವೆ ಬಾವಿಯನ್ನು ಕೊರೆಸಿದ್ದ. ಆದರೆ ನೀರು ಸಿಗಲಿಲ್ಲ ಎಂಬ ಕಾರಣಕ್ಕೆ ಮನನೊಂದು ತನ್ನ ತೆಂಗಿನ ತೋಟದಲ್ಲಿಯೇ ನೇಣಿಗೆ ಶರಣಾಗುವ ಮೂಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಈತ 1.5 ಲಕ್ಷ ಸಾಲ ಮಾಡಿಕೊಂಡಿದ್ದ ಎಂದೂ ತಿಳಿದು ಬಂದಿದ್ದು, ಈ ಸಂಬಂಧ ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 
 
ಇನ್ನು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ತಿಪ್ಪಾರೆಡ್ಡಿಹಳ್ಳಿಯಲ್ಲಿಯೂ ಕೂಡ ಓರ್ವ ರೈತ ಆತ್ಮಹತ್ಯೆಗೆ ಶರಣಾಗಿದ್ದು, ಸಿದ್ದೇಶ್(22) ಎಂಬಾತ ಮೃತ ದುರ್ಧೈವಿಯಾಗಿದ್ದಾನೆ. ಈತ 90 ಸಾವಿರ ಬ್ಯಾಂಕ್ ಸಾಲ ಮಾಡಿಕೊಂಡಿದ್ದ ಎನ್ನಲಾಗಿದ್ದು, ಈತ ಟೊಮೆಟೋ ಬೆಳೆಯನ್ನು ಬೆಳೆದಿದ್ದ. ಆದರೆ ಬೆಳೆ ನಿರೀಕ್ಷಿತ ಫಲ ನೀಡದ ಹಿನ್ನೆಲೆಯಲ್ಲಿ ಮನನೊಂದು ವಿಷ ಸೇವಿಸುವಮ ಮೂಲಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಸಂಬಂಧ ಪರಶುರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕಱಣ ದಾಖಲಾಗಿದ್ದು, ಜಿಲ್ಲೆಯಲ್ಲಿ ಇದುವರೆಗೆ 8 ಮಂದಿ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. 

ವೆಬ್ದುನಿಯಾವನ್ನು ಓದಿ