ಶೀಘ್ರದಲ್ಲೇ ರಾಜ್ಯಾದ್ಯಂತ ಮಂಗಳಮುಖಿಯರಿಗೆ ಪ್ರತ್ಯೇಕ ಶೌಚಾಲಯ: ಸಚಿವ ವಿನಯ್ ಕುಲಕರ್ಣಿ

ಶುಕ್ರವಾರ, 16 ಸೆಪ್ಟಂಬರ್ 2016 (16:37 IST)
ರಾಜಧಾನಿ ಬೆಂಗಳೂರಿನಲ್ಲಿ ಮಂಗಳಮುಖಿಯರಿಗಾಗಿ ಪ್ರತ್ಯೇಕ ಶೌಚಾಲಯ ನಿರ್ಮಿಸಲಾಗಿದ್ದು, ಶೀಘ್ರದಲ್ಲೇ ಇದನ್ನು ರಾಜ್ಯಾದ್ಯಂತ ವಿಸ್ತರಿಸಲಾಗುತ್ತದೆ ಎಂದು ಸಚಿವ ವಿನಯ್ ಕುಲಕರ್ಣಿ ತಿಳಿಸಿದ್ದಾರೆ.
 
ಧಾರವಾಡ ನಗರದಲ್ಲಿ ನಡೆದ ಎರಡನೆಯ ಜನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಧಾನಿ ಬೆಂಗಳೂರಿನಲ್ಲಿ ನಿರ್ಮಿಸಲಾಗಿರುವಂತೆ ರಾಜ್ಯಾದ್ಯಂತ ಮಂಗಳಮುಖಿಯರಿಗೆ ಪ್ರತೇಕ ಶೌಚಾಲಯ ನಿರ್ಮಿಸಲಾಗುತ್ತದೆ ಎಂದರು.
 
ಕಾರ್ಯಕ್ರಮದಲ್ಲಿ ಸರಕಾರದ ವಿವಿಧ ಯೋಜನೆಗಳ ಸೌಲಭ್ಯ ಪಡೆದವರೊಂದಿಗೆ ಚರ್ಚೆ ನಡೆಸಿದ ಅವರು, ಕೃಷಿ ಭಾಗ್ಯ ಯೋಜನೆಯ ಅಡಿ ಸಾಕಷ್ಟು ಹೊಂಡಗಳನ್ನು ನಿರ್ಮಿಸಲಾಗಿದ್ದು, ಇದು ರೈತರಿಕೆ ಸಾಕಷ್ಟು ಅನುಕೂಲವಾಗಿದೆ. ಅದರಂತೆ ಕ್ಷೀರಭಾಗ್ಯ ಯೋಜನೆ ಅಡಿಯಲ್ಲಿ ಮಕ್ಕಳಿಗೆ ಬಿಸಿ ಹಾಲು ಕೊಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
 
ಈ ವೇಳೆ ಸರಕಾರದ ಎಂಟು ಯೋಜನೆಗಳ ಸೌಲಭ್ಯ ಪಡೆದುಕೊಂಡಿರುವ ಧಾರವಾಡ ಜಿಲ್ಲೆಯ ಎಲ್ಲಾ ತಾಲೂಕಿನ ಫಲಾನುಭವಿಗಳು ಉಪಸ್ಥಿತರಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ