‘ನಾಡಪ್ರಭು ಕೆಂಪೇಗೌಡರ ಸಮಾಧಿ ಒಂದೇ ವರ್ಷದಲ್ಲಿ ಅಭಿವೃದ್ಧಿ’

ಶುಕ್ರವಾರ, 22 ಮೇ 2020 (19:19 IST)
ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಕೆಂಪಾಪುರದಲ್ಲಿರುವ ನಾಡಪ್ರಭು ಕೆಂಪೇಗೌಡರ ಸಮಾಧಿಯನ್ನು 15 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು.

ಹೀಗಂತ ಉಪ ಮುಖ್ಯಮಂತ್ರಿ, ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಐಟಿ &ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವರಾದ ಡಾ. ಅಶ್ವಥ್ ನಾರಾಯಣ ತಿಳಿಸಿದ್ದಾರೆ.

ಕೆಂಪಾಪುರದಲ್ಲಿರುವ ಕೆಂಪೇಗೌಡರ ಸಮಾಧಿಗೆ ಪೂಜೆ ಸಲ್ಲಿಸಿದ ನಂತರ ಮಾತನಾಡಿ, ಕೆಂಪೇಗೌಡರ ಸಮಾಧಿ ಅಭಿವೃದ್ಧಿಗೆ 8 ಎಕರೆ ಜಮೀನು ಬೇಕಿದ್ದು, ಇದನ್ನು ಭೂಸ್ವಾಧೀನ ಮಾಡುವ ಕೆಲಸ ಪ್ರಾರಂಭಿಸಲಾಗುವುದು. ರೈತರಿಗೂ ಸಹ ಅನುಕೂಲವಾಗುವಂತೆ ಸುಸಜ್ಜಿತವಾಗಿ ಕೆಂಪಾಪುರದ ಸರ್ವಾಂಗೀಣ ಅಭಿವೃದ್ಧಿ ಮಾಡಲಾಗುವುದು.

ಕೆಂಪಾಪುರದಲ್ಲಿರುವ ಕೆರೆಯ ಅಭಿವೃದ್ಧಿಗೂ 12 ಕೋಟಿ ರೂ. ಅನುದಾನ ನಿಗದಿ ಮಾಡಲಾಗಿದೆ. ಅಭಿವೃದ್ಧಿ ಕಾರ್ಯಗಳಿಗೆ ನೀಲಿನಕ್ಷೆ ಕೂಡ ಸಿದ್ಧಪಡಿಲಾಗಿದ್ದು, ಗ್ರಾಮಸ್ಥರು ಸಹಕಾರ ನೀಡಿದರೆ ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣಗೊಳಿಸಿ ಉದ್ಘಾಟಿಸಲಾಗುವುದು ಎಂದಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ