ಶಿವಮೋಗ್ಗದಲ್ಲಿ ನಾಳೆ ಹೋಳಿ: ನಿಷೇಧಾಜ್ಞೆ ಜಾರಿ

ಶುಕ್ರವಾರ, 6 ಮಾರ್ಚ್ 2015 (11:35 IST)
ನಾಳೆ ನಗರಾದ್ಯಂತ ಹೋಳಿ ಹಬ್ಬವನ್ನು ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಜಿಲ್ಲಾಧಿಕಾರಿ ಪಿ.ವಿ.ಇಕ್ಕೇರಿ ಅವರು ನಗರದ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿದ್ದಾರೆ. 
 
ಮಾಧ್ಯಮಗಳೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿಗಳು, ಹೋಳಿ ಹಬ್ಬದ ಹಿನ್ನೆಲೆಯಲ್ಲಿ ನಾಳೆ ಶಿವಮೊಗ್ಗ ನಗರದಲ್ಲಿ ಹೋಳಿ ಆಚರಿಸಲಾಗುತ್ತಿದೆ. ಆದರೆ ನಾಳೆ ಬೆಳಗ್ಗೆಯಿಂದ ಮಧ್ಯಾಹ್ನದ ವರೆಗೆ ಮಾತ್ರ ಹೋಳಿ ಆಚರಣೆಗೆ ಅವಕಾಶ ನೀಡಲಾಗಿದ್ದು, ಬಳಿಕ ಮಧ್ಯಾಹ್ನದಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತದೆ. ಈ ನಿಷೇಧಾಜ್ಞೆಯು ಮಾರ್ಚ್ 8ರ ಬೆಳಗಿನ ವರೆಗೆ ಜಾರಿಯಲ್ಲಿದೆ. ಜೊತೆಗೆ ನಿಷೇಧಾಜ್ಞೆ ಹಿನ್ನೆಲೆಯಲ್ಲಿ ನಗರಾದ್ಯಂತ ಎರಡು ದಿನಗಳ ಕಾಲ ಮದ್ಯಮಾರಾಟಕ್ಕೆ ನಿಷೇಧ ಹೇರಲಾಗಿದೆ ಎಂದು ತಿಳಿಸಿದರು. 
 
ಬಳಿಕ ಮಾತನಾಡಿದ ಅವರು, ಕಳೆದ ಕೆಲ ದಿನಗಳ ಹಿಂದೆ ಪ್ರತಿಭಟನಾ ಮೆರವಣಿಗೆಯಲ್ಲಿ ತೊಡಗಿದ್ದ ಎರಡು ಸಂಘಟನೆಗಳ ನಡುವೆ ಮಾರಾಮಾರಿ ನಡೆದಿತ್ತು. ಆ ಸಂಧರ್ಭದಲ್ಲಿ ವಿಶ್ವನಾಥ್ ಮತ್ತು ಮಂಜುನಾಥ್ ಎಂಬ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದರು. ಇದಲ್ಲದೆ ಪಶು ವೈದ್ಯರೋರ್ವರ ಮೇಲೆ ದಾಳಿ ನಡೆಸಿದ್ದ ಗುಂಪೊಂದು ಅವರ ಕುತ್ತಿಗೆ ಕೊಯ್ದು ಹಲ್ಲೆ ನಡೆಸಿತ್ತು. ಈ ಹಿನ್ನೆಲೆಯಲ್ಲಿ ಈ ಬಾರಿಯೂ ಕೂಡ ಅಂತಹ ಕಹಿ ಘಟನೆಗಳು ಜರುಗಬಹುದು ಎಂಬ ಮುನ್ನೆಚ್ಚರಿಕೆಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದರು. 

ವೆಬ್ದುನಿಯಾವನ್ನು ಓದಿ