ನಾಳೆ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಯ ಓಪಿಡಿ ಬಂದ್

ಗುರುವಾರ, 7 ನವೆಂಬರ್ 2019 (13:37 IST)
ಬೆಂಗಳೂರು : ಮಿಂಟೋ ಆಸ್ಪತ್ರೆಯಲ್ಲಿ ವೈದ್ಯರ ಮೇಲೆ ಮಾಡಿದ ಹಲ್ಲೆ ವಿಚಾರಕ್ಕೆ ನಡೆಸುತ್ತಿರುವ ಪ್ರತಿಭಟನೆಗೆ ಇದೀಗ ಭಾರತೀಯ ವೈದ್ಯಕೀಯ ಸಂಘವೂ ಬೆಂಬಲಿಸಿದ್ದು, ಈ ಹಿನ್ನಲೆಯಲ್ಲಿ ನಾಳೆ  ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಯ ಓಪಿಡಿ ಬಂದ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.




ಹೌದು ವೈದ್ಯರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸರ್ಕಾರಿ ಆಸ್ಪತ್ರೆಯ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದು, ಇದೀಗ ಇದಕ್ಕೆ ಖಾಸಗಿ ಆಸ್ಪತ್ರೆಯ ವೈದ್ಯರು ಬೆಂಬಲ ಸೂಚಿಸಿದ್ದಾರೆ. ವೈದ್ಯರ ಪ್ರತಿಭಟನೆ ಕೈಬಿಡುವಂತೆ ಸರ್ಕಾರ ಮನವೊಲಿಸಿದ್ದರು ಯಾವುದೇ ಪ್ರಯೋಜನವಾಗಲಿಲ್ಲ.


ಆದಕಾರಣ ನಾಳೆ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ಹೊರರೋಗಿ ವಿಭಾಗ ಬಂದ್ ಆಗಲಿದೆ. ಆದರೆ ತುರ್ತು ಚಿಕಿತ್ಸಾ ಮಾತ್ರ ಕಾರ್ಯ ನಿರ್ವಹಿಸಲಿದೆ ಎಂದು ಐಎಂಎ ಕಾರ್ಯದರ್ಶಿ ಶ್ರೀನಿವಾಸ ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ