ನಾಳೆಯ ವಿಧಾನಮಂಡಲ ಕಲಾಪ ಬುಧವಾರಕ್ಕೆ ಮುಂದೂಡಿಕೆ

geetha

ಭಾನುವಾರ, 25 ಫೆಬ್ರವರಿ 2024 (20:00 IST)
ಬೆಂಗಳೂರು--ಸುರಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ನಿಧನದ ಹಿನ್ನಲೆಯಲ್ಲಿ ನಾಳೆಯ ವಿಧಾನಮಂಡಲದ ಕಲಾಪವನ್ನು ಬುಧವಾರಕ್ಕೆ ಮುಂದೂಡಲಾಗಿದೆ.
 
ಶಾಸಕರ ನಿಧನದ ಹಿನ್ನೆಲೆಯಲ್ಲಿ ಸೋಮವಾರದ ಅಧಿವೇಶನವನ್ನು ಸಂತಾಪ ಸೂಚಕವಾಗಿ ಒಂದು ದಿನ ಮುಂದೂಡಲಾಗುವುದು. ಮಂಗಳವಾರ ರಾಜ್ಯಸಭಾ ಚುನಾವಣೆ ಇರುವುದರಿಂದ ಬುಧವಾರಕ್ಕೆ ಅಧಿವೇಶನ ಮುಂದೂಡಬೇಕಾಗುತ್ತದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದರು.
 
ಇಂದು ಶಾಸಕ ವೆಂಕಟಪ್ಪ ನಾಯಕ ಅವರ ಅಂತಿಮ ದರ್ಶನ ಪಡೆದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂತಾಪ ನುಡಿಗಳನ್ನು  ಹಾಡಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ