ನಾಳೆಯವರೆಗೂ ನೀರು ಬಿಡದಿರಲು ನಿರ್ಧಾರ: ಸಿಎಂ ಸಿದ್ದರಾಮಯ್ಯ

ಬುಧವಾರ, 28 ಸೆಪ್ಟಂಬರ್ 2016 (18:54 IST)
ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಹರಿಸುವಂತೆ ಮತ್ತೆ ಸುಪ್ರೀಂಕೋರ್ಟ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ ನಾಳೆಯವರೆಗೂ ನೀರು ಬಿಡದಿರಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
 
ಮಂತ್ರಿ ಪರಿಷತ್ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ವಪಕ್ಷ ಸಭೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಸಲಹೆಯಂತೆ ಕಾವೇರಿ ನದಿಯಿಂದ ತಮಿಳುನಾಡಿಗೆ ನಾಳೆಯವರೆಗೂ ನೀರು ಬಿಡದಿರಲು ನಿರ್ಧರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
 
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ನಾಳೆ ಕೇಂದ್ರ ಜಲ ಸಂಪನ್ಮೂಲ ಸಚಿವೆ ಉಮಾಭಾರತಿ ನೇತೃತ್ವದಲ್ಲಿ ಉಭಯ ರಾಜ್ಯಗಳ ಅಧಿಕಾರಿಗಳೊಂದಿಗೆ ಸಭೆ ನಡೆಯಲಿದ್ದು, ಸಭೆಯ ಬಳಿಕ ನೀರು ಬಿಡಬೇಕೋ ಅಥವಾ ಬಿಡಬಾರದೋ ಎಂದು ನಿರ್ಧರಿಸಲಾಗುತ್ತದೆ ಎಂದು ಹೇಳಿದರು.
 
ನ್ಯಾಯಾಲಯದ ಆದೇಶ ಉಲ್ಲಂಘಿಸಬೇಕು ಎನ್ನುವುದು ನಮ್ಮ ಉದ್ದೇಶವಲ್ಲ. ರಾಜ್ಯದಲ್ಲಿ ಕುಡಿಯುವ ನೀರಿಗೂ ಅಭಾವವಿದೆ. ಹೀಗಾಗಿ ವಿಧಾನ ಮಂಡಲ ವಿಶೇಷ ಅಧಿವೇಶನದಲ್ಲಿ ಕಾವೇರಿಯಿಂದ ತಮಿಳುನಾಡಿಗೆ ನೀರು ಹರಿಸದಂತೆ ನಿರ್ಣಯ ಕೈಗೊಳ್ಳಲಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ