ತಿಪಟೂರು: ಜೀತಕ್ಕೆ ಇಟ್ಟುಕೊಂಡವರಂತೆ ಟಾರ್ಚರ್, 36 ಕಾರ್ಮಿಕರ ರಕ್ಷಣೆ

Sampriya

ಗುರುವಾರ, 5 ಸೆಪ್ಟಂಬರ್ 2024 (15:28 IST)
Photo Courtesy X
ತಿಪಟೂರು:  ಮಂಜುನಾಥಪುರ ಸುತ್ತಮುತ್ತಲಿನ ಶುಂಠಿ ಜಮೀನಿನಲ್ಲಿ ಜೀತದಾಳುಗಳಂತೆ ಬಲವಂತವಾಗಿ ದುಡಿಸುತ್ತಿದ್ದ 36 ಕಾರ್ಮಿಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತಾಲ್ಲೂಕಿನ ಹಾಲ್ಕುರಿಕೆ, ಮಂಜುನಾಥಪುರ ಸುತ್ತಮುತ್ತಲಿನ ಪ್ರದೇಶದಲ್ಲಿ ಮೈಸೂರು, ಚಾಮರಾಜನಗರ, ಕೊಳ್ಳೇಗಾಲ, ಬಳ್ಳಾರಿ, ವಿಜಯಪುರ ಸೇರಿ ವಿವಿಧ ಜಿಲ್ಲೆಗಳ ಕಾರ್ಮಿಕರಿಗೆ ಹೆಚ್ಚಿನ ಕೂಲಿ ಆಸೆ ತೋರಿಸಿ ಜಮೀನಿನಲ್ಲಿ ಕೆಲಸ ಮಾಡಲು ಕರೆ ತಂದಿದ್ದರು. ಇಲ್ಲಿಗೆ ಬಂದ ನಂತರ ಅವರು ನಮ್ಮ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ.

ಕೆಲಸದಿಂದ ಸ್ಥಳದಿಂದ ಹೊರ ಹೋಗಲು ಬಿಡುತ್ತಿಲ್ಲ, ಅಗತ್ಯ ಸೌಲಭ್ಯ, ಕೂಲಿ ಹಣ ಕೊಡದೆ ದುಡಿಸಿ ಕೊಳ್ಳಲಾಗುತ್ತಿದೆ. ನಮ್ಮ ಆಧಾರ್ ಕಾರ್ಡ್‌, ವೋಟರ್ ಐಡಿಯನ್ನು ಕಸಿದುಕೊಂಡು ನಮ್ಮನ್ನು ದುಡಿಸುತ್ತಿದ್ದಾರೆ ಎಂದು ಕಾರ್ಮಿಕರು ಆರೋಪಿಸಿದ್ದಾರೆ.

ಸ್ಥಳೀಯರ ನೆರವಿನಿಂದ ರಕ್ಷಿಸಲ್ಪಟ್ಟ ಕಾರ್ಮಿಕರನ್ನು ಹೊನ್ನವಳ್ಳಿ ಸಮುದಾಯ ಭವನದಲ್ಲಿ ಆಶ್ರಯ ಕಲ್ಪಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ