ನಾನು ಸಿಎಂ ಆದ್ರೆ ಭ್ರಷ್ಟಾಚಾರಿಗಳ ವಿರುದ್ಧ ಕಠಿಣ ಕ್ರಮ: ಯಡಿಯೂರಪ್ಪ

ಮಂಗಳವಾರ, 14 ನವೆಂಬರ್ 2017 (16:10 IST)
ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದಲ್ಲಿ ಅಧಿಕಾರದ ಮದದಿಂದ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವವರನ್ನು ಜೈಲಿಗೆ ಕಳುಹಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ.  
ಸಿಎಂ ಸಿದ್ದರಾಮಯ್ಯ ಅಸ್ತಿತ್ವಕ್ಕೆ ತಂದ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರದಲ್ಲಿರುವವರಿಗೆ ಕ್ಲೀನ್ ಚಿಟ್ ನೀಡುತ್ತಿದೆ. ನಮ್ಮ ಸರಕಾರ ಅಧಿಕಾರಕ್ಕೆ ಬರಲಿ. ಕ್ಲೀನ್ ಚಿಟ್ ಪಡೆದ ಪ್ರಕರಣಗಳ ಮರುತನಿಖೆಗೆ ಆದೇಶಿಸಿ ಭ್ರಷ್ಟರನ್ನು ಕೃಷ್ಣನ ಜನ್ಮಸ್ಥಾನಕ್ಕೆ ಅಟ್ಟುತ್ತೇನೆ ಎಂದು ಅಬ್ಬರಿಸಿದ್ದಾರೆ
 
ಲೋಕಾಯುಕ್ತ ಸಂಸ್ಥೆಯ ಹಾಳುಗೆಡುವಿ ಭ್ರಷ್ಟಾಚಾರ ನಿಗ್ರಹ ದಳ ಸ್ಥಾಪಿಸಿ ಕಾಂಗ್ರೆಸ್ ನಾಯಕರ ಭ್ರಷ್ಟಾಚಾರವನ್ನು ವ್ಯವಸ್ಥಿತವಾಗಿ ಮುಚ್ಚಿಹಾಕಲಾಗುತ್ತಿದೆ ಎಂದು ಆರೋಪಿಸಿದರು.
 
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಕೂಡಲೇ ಸಿಎಂ ಸಿದ್ದರಾಮಯ್ಯ ಸೇರಿದಂತೆ ಭ್ರಷ್ಟಾಚಾರದಲ್ಲಿ ಪಾಲ್ಗೊಂಡ ಪ್ರತಿಯೊಬ್ಬರ ವಿರುದ್ಧ ತನಿಖೆ ನಡೆಸಿ ಕಠಿಣ ಕ್ರಮಕೈಗೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.
 
ಪ್ರಧಾನಿ ಮೋದಿ ದೇಶವನ್ನೇ ಕಾಂಗ್ರೆಸ್ ಮುಕ್ತವಾಗಿಸುವ ಪಣ ತೊಟ್ಟಿದ್ದಾರೆ.ಅದಕ್ಕೆ ಮೊದಲು ಕರ್ನಾಟಕವನ್ನು ಕಾಂಗ್ರೆಸ್ ಮುಕ್ತಗೊಳಿಸಬೇಕು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಶಾಂತಿಯ ವಾತಾವರಣ ತರಲು ಬಿಜೆಪಿಗೆ ಮತ ನೀಡಿ ಎಂದು ಮತದಾರರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ