ಸರಕಾರಿ ಆ್ಯಂಬುಲೆನ್ಸ್ ನಲ್ಲಿ ಅಕ್ರಮ ಮದ್ಯ ಸಾಗಾಟ
ರೋಗಿಗಳ ತುರ್ತು ಸೇವೆಗಾಗಿ ಸರ್ಕಾರ ನೀಡಿರುವ ಆಂಬ್ಯುಲೆನ್ಸ್ ಮೂಲಕವೇ ಮದ್ಯ ಸಾಗಾಟ ಮಾಡುತ್ತಿದ್ದ ಪ್ರಕರಣ ಬಯಲಾಗಿದೆ.
ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ಹೆಚ್.ಡಿ ಪುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಆಂಬ್ಯುಲೆನ್ಸ್ ನಲ್ಲಿ ಚಾಲಕ ಸುಹಾನ್ ಹಾಗೂ ಲ್ಯಾಬ್ ಟೆಕ್ನೀಶಿಯನ್ ಸಂತೋಷ್ ಇವರು ಸೇರಿಕೊಂಡು ಚಳ್ಳಕೆರೆ ತಾಲೂಕಿನ ಉಳ್ಳಾರ್ತಿ ಗ್ರಾಮದ ನರಸಿಂಹರಾಜು ಎಂಬ ವ್ಯಕ್ತಿಗೆ ಸೇರಿದ ಬಾರ್ ನಿಂದ ಮದ್ಯ ತುಂಬಿಸಿಕೊಂಡು ಬಂದು ಖಾಸಗಿ ಓಮ್ನಿಗಳಿಗೆ ವರ್ಗಾಯಿಸುತ್ತಿದ್ದರು.