ಬೆಂಗಳೂರು-ಮಂಗಳೂರು ರೈಲುಗಳಿಗೆ ವಿಶೇಷ ವಿಸ್ಟಾಡೋಮ್‌ ಭೋಗಿಗಳ ಸೇರ್ಪಡೆ

ಶನಿವಾರ, 3 ಜುಲೈ 2021 (14:56 IST)
ಬೆಂಗಳೂರು: ರಾಜ್ಯದಲ್ಲಿ  ಮೊದಲ ಬಾರಿಗೆ ಗಾಜಿನ ಛಾವಣಿ ಹೊಂದಿರುವ ಆಕರ್ಷಕ ಗಾಜಿನ ಮೇಲ್ಚಾವಣಿ ಹೊಂದಿರುವ ಬೋಗಿಯ ರೈಲು ಪ್ರಯಾಣದ ಬುಕಿಂಗ್ ಆರಂಭವಾಗಿದೆ. ಯಶವಂತಪುರದಿಂದ ಮಂಗಳೂರು ರೈಲುಗಳಿಗೆ ಆಕರ್ಷಕ ವಿಸ್ಟಾಡೋಮ್‌ ಬೋಗಿಗಳು ಜುಲೈ  7ರಿಂದ ಸೇರ್ಪಡೆಗೊಳ್ಳಲಿದೆ ಎಂದು ಬೆಂಗಳೂರು ವಿಭಾಗದ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
 
ಶನಿವಾರದಿಂದ ಬುಕಿಂಗ್‌ ಆರಂಭವಾಗಲಿದೆ. ಯಶವಂತಪುರದಿಂದ ಮಂಗಳೂರಿಗೆ 1,470 ರೂ. ದರ ನಿಗದಿಪಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
 
ಪ್ರಕೃತಿ ಹಾಗೂ ಕಡಲತೀರದ ಸೌಂದರ್ಯದಿಂದಲೇ ಹೆಸರುವಾಸಿಯಾಗಿರುವ ಪಶ್ಚಿಮಘಟ್ಟ ಮತ್ತು ಕರಾವಳಿ ಭಾಗದಲ್ಲಿ ಸಂಚರಿಸುವ ಮೂರು ರೈಲುಗಳ ದ್ವಿತೀಯ ದರ್ಜೆಯ ಒಂದು ಸಾಮಾನ್ಯ ಬೋಗಿಯನ್ನು ತೆಗೆದು ತಲಾ ಎರಡು ವಿಸ್ಟಾಡೋಮ್‌ ಕೋಚ್‌ಗಳನ್ನು ಜೋಡಿಸಲಾಗುತ್ತದೆ ಎಂದು ಹೇಳಿದ್ದಾರೆ.
 
ವಾರದಲ್ಲಿ 3 ಬಾರಿ ಸಂಚರಿಸುವ ಯಶವಂತಪುರ- ಕಾರವಾರ ವಿಶೇಷ ರೈಲು (ರೈಲು ಸಂಖ್ಯೆ  06211 /06212),  ಯಶವಂತಪುರ- ಮಂಗಳೂರು ಜಂಕ್ಷನ್‌ ವಿಶೇಷ ರೈಲು (ರೈಲು ಸಂಖ್ಯೆ 06575/06576) ವಿಶೇಷ ಭೋಗಿಳು ಸೇರ್ಪಡೆಗೊಳ್ಳಲಿವೆ ಎಂದು ಹೇಳಿದ್ದಾರೆ.
 
ಯಶವಂತಪುರ -ಮಂಗಳೂರು (ರೈಲು ಸಂಖ್ಯೆ  06539) ಹಾಗೂ ಮಂಗಳೂರು ಜಂಕ್ಷನ್‌-ಯಶವಂತಪುರ ಎಕ್ಸ್‌ಪ್ರೆಸ್‌ನಲ್ಲಿ (ರೈಲು ಸಂಖ್ಯೆ  06540 ) ವಿಸ್ಟಾಡೋಮ್‌ ಬೋಗಿಗಳು ಇರಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
 
ಸಕಲೇಶಪುರದಿಂದ ಸುಬ್ರಹ್ಮಣ್ಯದವರೆಗೆ ಹಾದುಹೋಗುವ 55 ಕಿ.ಮೀ. ರೈಲು ಮಾರ್ಗ ಪ್ರಯಾಣಿಕರ ಪಾಲಿಗೆ ಸ್ವರ್ಗ. ಕಳೆದ ಹಲವು ವರ್ಷಗಳಿಂದ ಈ ಮಾರ್ಗದಲ್ಲಿ ಸಂಚರಿಸುವ ರೈಲುಗಳಿಗೆ ಗಾಜಿನ ಛಾವಣಿ, ಕಿಟಕಿಗಳನ್ನು ಅಳವಡಿಸುವಂತೆ ಸಾಕಷ್ಟು ಪ್ರಯಾಣಿಕರು ಈ ಹಿಂದೆ ಮನವಿ ಮಾಡಿದ್ದರು.
 
ಪಶ್ಚಿಮ ಘಟ್ಟವನ್ನು ಸೀಳಿಕೊಂಡು ಹೋಗಿರುವ ಈ ರೈಲುಮಾರ್ಗದಲ್ಲಿ ಸಂಚರಿಸುವವರಿಗೆ ಶಿರಾಡಿ ಘಾಟ್ ಸೌಂದರ್ಯವನ್ನು ರೈಲಿನೊಳಗೆ ಕುಳಿತು ನೋಡಬಹುದು. ಮಾರ್ಗಮಧ್ಯದಲ್ಲಿ ಕಾಣಸಿಗುವ ಅರಣ್ಯ, ಜಲಪಾತ, ಸುರಂಗ, ಸೇತುವೆಗಳ ರಮಣೀಯ ನೋಟವನ್ನು ಪ್ರಯಾಣಿಕರು ಸವಿಯಬಹುದು. ಮಳೆಗಾಲ ಕೂಡ ಆರಂಭವಾಗಿರುವುದರಿಂದ ಪ್ರಯಾಣ ಪ್ರಯಾಣಿಕರು ದೃಶ್ಯ ಎಂಜಾಯ್ ಮಾಡಬಹುದದು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ