ಸಕಲೇಶಪುರದಿಂದ ಸುಬ್ರಹ್ಮಣ್ಯದವರೆಗೆ ಹಾದುಹೋಗುವ 55 ಕಿ.ಮೀ. ರೈಲು ಮಾರ್ಗ ಪ್ರಯಾಣಿಕರ ಪಾಲಿಗೆ ಸ್ವರ್ಗ. ಕಳೆದ ಹಲವು ವರ್ಷಗಳಿಂದ ಈ ಮಾರ್ಗದಲ್ಲಿ ಸಂಚರಿಸುವ ರೈಲುಗಳಿಗೆ ಗಾಜಿನ ಛಾವಣಿ, ಕಿಟಕಿಗಳನ್ನು ಅಳವಡಿಸುವಂತೆ ಸಾಕಷ್ಟು ಪ್ರಯಾಣಿಕರು ಈ ಹಿಂದೆ ಮನವಿ ಮಾಡಿದ್ದರು.
ಪಶ್ಚಿಮ ಘಟ್ಟವನ್ನು ಸೀಳಿಕೊಂಡು ಹೋಗಿರುವ ಈ ರೈಲುಮಾರ್ಗದಲ್ಲಿ ಸಂಚರಿಸುವವರಿಗೆ ಶಿರಾಡಿ ಘಾಟ್ ಸೌಂದರ್ಯವನ್ನು ರೈಲಿನೊಳಗೆ ಕುಳಿತು ನೋಡಬಹುದು. ಮಾರ್ಗಮಧ್ಯದಲ್ಲಿ ಕಾಣಸಿಗುವ ಅರಣ್ಯ, ಜಲಪಾತ, ಸುರಂಗ, ಸೇತುವೆಗಳ ರಮಣೀಯ ನೋಟವನ್ನು ಪ್ರಯಾಣಿಕರು ಸವಿಯಬಹುದು. ಮಳೆಗಾಲ ಕೂಡ ಆರಂಭವಾಗಿರುವುದರಿಂದ ಪ್ರಯಾಣ ಪ್ರಯಾಣಿಕರು ದೃಶ್ಯ ಎಂಜಾಯ್ ಮಾಡಬಹುದದು.