ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ವೈದ್ಯಕೀಯ, ಎಂಜಿನಿಯರಿಂಗ್ ಮತ್ತಿತರ ವೃತ್ತಿಪರ ಕೋರ್ಸುಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವೇಶ ಪಡೆಯಲು ಅನುಕೂಲವಾಗುವಂತೆ ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಥಮ ಪಿಯುಸಿ ಹಂತದಿಂದಲೇ ಸರ್ಕಾರಿ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ನೀಟ್, ಸಿಇಟಿ ಪರೀಕ್ಷೆಗೆ ತರಬೇತಿ ನೀಡಲಾಗುತ್ತದೆ.
ಈ ಹಿಂದೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಇಟಿ ಪರೀಕ್ಷೆ ತರಬೇತಿ ನೀಡಲಾಗುತ್ತಿದ್ದು, ಬಳಿಕ ಯೋಜನೆ ಕೈಬಿಡಲಾಗಿತ್ತು. NCERT ಪಠ್ಯಕ್ರಮದ ಅನ್ವಯ ಮತ್ತು ಪ್ರಥಮ ಪಿಯುಸಿ ಹಂತದಿಂದಲೇ ಸರ್ಕಾರಿ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ಸಿಇಟಿ ಮತ್ತು ಪರೀಕ್ಷೆಗೆ ತರಬೇತಿ ನೀಡಲಾಗುತ್ತದೆ. ಪ್ರತಿ ತಾಲೂಕಿನಲ್ಲಿ ಒಂದು ನೋಡಲ್ ಕಾಲೇಜು ಗುರುತಿಸಿ ತರಬೇತಿ ನೀಡಲಾಗುವುದು ಎನ್ನಲಾಗಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಿಶ್ವಾಸ ಕಿರಣ ಯೋಜನೆಯಡಿ ಇಂಗ್ಲಿಷ್ ತರಬೇತಿ ನೀಡುತ್ತಿದ್ದು, ಇದನ್ನು ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ವಿಸ್ತರಿಸಲು ಪರವಿಪೂರ್ವ ಶಿಕ್ಷಣ ಇಲಾಖೆ ತೀರ್ಮಾನಿಸಿದೆ.