ವರ್ಗಾವಣೆ ದಂಧೆ ವಿಚಾರ; ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ತಂದೆ, ಮಗ

ಸೋಮವಾರ, 19 ಆಗಸ್ಟ್ 2019 (12:26 IST)
ಬೆಂಗಳೂರು : ವರ್ಗಾವಣೆ ದಂಧೆ ಮಾಡಲು ಯಡಿಯೂರಪ್ಪ ಸ್ವತಃ ತಮ್ಮ ಸುಪುತ್ರನನ್ನೇ ಬಿಟ್ಟಿದ್ದಾರೆ ಎಂಬ ಹೆಚ್.ಡಿ ಕುಮಾರಸ್ವಾಮಿ ಅವರ ಮಾತಿಗೆ ಸಿಎಂ ಹಾಗೂ ಅವರ ಪುತ್ರ ತಿರುಗೇಟು ನೀಡಿದ್ದಾರೆ.


ಈ ವಿಚಾರವಾಗಿ ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಸಿಎ ಪುತ್ರ ವಿಜಯೇಂದ್ರ ಅವರು, ಕಮೀಷನ್ ದಂಧೆ, ವರ್ಗಾವಣೆ ದಂಧೆ, ನೇಮಕಾತಿ ದಂಧೆಗಳ ಜನಕರು ಹಾಗೂ ಗುತ್ತಿಗೆದಾರರು ನೀವು ಎನ್ನುವುದು ಇಡೀ ರಾಜ್ಯಕ್ಕೇ ತಿಳಿದಿದೆ ಕುಮಾರಸ್ವಾಮಿಯವರೇ. ಕೋತಿ ತಾನು ತಿಂದು ಮೇಕೆ ಬಾಯಿಗೆ ಒರೆಸಿದಂತಿದೆ ನಿಮ್ಮ ಮಾತುಗಳು. ಸಿಬಿಐ ತನಿಖೆಗೆ ಹೆದರಿ ಹತಾಶ ಹೇಳಿಕೆ ನೀಡುತ್ತಿದ್ದೀರಿ. ವಿಷಯಾಂತರಗೊಳಿಸಿ ಜನತೆಯ ದಿಕ್ಕು ತಪ್ಪಿಸುವ ಕುತಂತ್ರದ ಮಾತು ನಿಲ್ಲಿಸಿ ಎಂದು ಹೇಳಿದ್ದಾರೆ.

 

ಹಾಗೇ ಈ ಬಗ್ಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಹೆಚ್.ಡಿ.ಕೆ. ಅವಧಿಯಲ್ಲಿ ಏನಾಗಿದೆ ಎಂದು ಜಗತ್ತಿಗೆ ಗೊತ್ತು. ನನ್ನ ಬಾಯಿಂದ ಏಕೆ ಅದನ್ನ ಹೇಳಿಸುತ್ತೀರಿ. ಹೆಚ್.ಡಿ.ಕುಮಾರಸ್ವಾಮಿಗೆ ದೇವರು ಒಳ್ಳೆಯದನ್ನು ಮಾಡಲಿ ಎಂದು ಹೇಳಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ