ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಮಂಗಳವಾರ, 15 ನವೆಂಬರ್ 2022 (10:33 IST)
ಬೆಂಗಳೂರು : ರಾಜ್ಯ ಸರ್ಕಾರ 11 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಏಳು ಅಧಿಕಾರಿಗಳು ವರ್ಗಾವಣೆಯಾದರೆ, 4 ಅಧಿಕಾರಿಗಳಿಗೆ ಮುಂಬಡ್ತಿ ನೀಡಲಾಗಿದೆ.

ಎಂ.ಎ ಸಲೀಂ ಅವರನ್ನು ಸ್ಪೆಷಲ್ ಟ್ರಾಫಿಕ್ ಕಮಿಷನರ್ ಆಗಿ ನೇಮಕ ಮಾಡಲಾಗಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಬೆಂಗಳೂರಿಗೆ ಸ್ಪೆಷಲ್ ಟ್ರಾಫಿಕ್ ಕಮಿಷನರ್ ನೇಮಕ ಮಾಡುವ ಮೂಲಕ ನೂತನ ಹುದ್ದೆಯನ್ನು ಸೃಷ್ಟಿಸಲಾಗಿದೆ.

ಜೊತೆಗೆ ಟ್ರಾಫಿಕ್ ಕಮೀಷನರ್ ಹುದ್ದೆಗೆ ಎಡಿಜಿಪಿ ದರ್ಜೆ ಅಧಿಕಾರಿ ನೇಮಿಸಿರುವುದು ಇಲ್ಲಿ ಗಮನಿಸಬೇಕಾದ ಅಂಶವಾಗಿದೆ.

ರಮೇಶ್ ಬಾನೋತ್ ಅವರನ್ನು ಮೈಸೂರು ಕಮಿಷನರ್ ಆಗಿ ವರ್ಗಾವಣೆ ಮಾಡಲಾಗಿದೆ. ಸಿಐಡಿ ವಿಭಾಗದಲ್ಲಿ ಎಡಿಜಿಪಿಯಾಗಿದ್ದ ಉಮೇಶ್ ಕುಮಾರ್ ಅವರನ್ನು ಆಡಳಿತ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆಗೊಳಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ