ರಾಜ್ಯದ ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಮಂಗಳವಾರ, 1 ನವೆಂಬರ್ 2022 (08:30 IST)
ಬೆಂಗಳೂರು : ಕಲಬುರಗಿ, ಬೆಳಗಾವಿ, ಬಳ್ಳಾರಿ ಹಾಗೂ ಬೆಂಗಳೂರು ಸೇರಿದಂತೆ ರಾಜ್ಯದ 11 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರು ಹಾಗೂ ಪ್ರಿನ್ಸಿಪಲ್ ಸೆಕ್ರೇಟರಿ ಆಗಿದ್ದ ಮಾಲಿನಿ ಕೃಷ್ಣ ಮೂರ್ತಿ ಅವರನ್ನು ಐಎಸ್ಡಿ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರಾಗಿ ವರ್ಗಾಯಿಸಲಾಗಿದೆ.

ಎಸಿಬಿ ಸೀಮಂತ್ ಕುಮಾರ್ ಸಿಂಗ್ ಅವರನ್ನ ಕೆಎಸ್ಆರ್ಪಿ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ.  ಕೆಎಸ್ಆರ್ಪಿ ಐಜಿಪಿ ಆಗಿದ್ದ ಎಸ್.ರವಿ ಅವರನ್ನು ಪೊಲೀಸ್ ಅಂಡ್ ಪ್ರಿನ್ಸಿಪಲ್ ಸೆಕ್ರಟೆರಿ ಆಗಿ ವರ್ಗಾಯಿಸಲಾಗಿದೆ. ಅಜಯ್ ಹಿಲೋರಿ ಅವರನ್ನ ಡಿಸಿಆರ್ಇ ಪೊಲೀಸ್ ಅಧೀಕ್ಷಕರಾಗಿ ವರ್ಗಾವಣೆ ಮಾಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ