ಸಿಎಂ ನೇತೃತ್ವದ ಸಾರಿಗೆ ನೌಕರರ ಸಭೆ ವಿಫಲ

ಶುಕ್ರವಾರ, 22 ಜುಲೈ 2016 (17:34 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಾರಿಗೆ ನೌಕರರ ಸಭೆ ವಿಫಲವಾಗಿದ್ದು, ಜುಲೈ 24 ರ ಮಧ್ಯರಾತ್ರಿಯಿಂದಲೇ ಮುಷ್ಕರ ನಡೆಸುವುದಾಗಿ ಸಾರಿಗೆ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಅನಂತ್ ಸುಬ್ಬರಾವ್ ತಿಳಿಸಿದ್ದಾರೆ.
 
ಸಾರಿಗೆ ನೌಕರರ ವಿವಿಧ ಬೇಡಿಕೆ ಕುರಿತಂತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹ ಕಚೇರಿಯಲ್ಲಿ ಸಾರಿಗೆ ನೌಕರರ ಸಭೆ ಕರೆಯಲಾಗಿತ್ತು. ಆದರೆ, ಸಭೆ ವಿಫಲವಾಗಿದೆ ಎಂದು ತಿಳಿದು ಬಂದಿದೆ.
 
ಸಾರಿಗೆ ನೌಕರರ ವೇತನವನ್ನು 35 ಪ್ರತಿಶತಕ್ಕೆ ಹೆಚ್ಚಳ ಮಾಡುವಂತೆ ಒತ್ತಾಯ ಮಾಡಲಾಗಿತ್ತು. ಆದರೆ, 10 ಪ್ರತಿಶತ ವೇತನ ಹೆಚ್ಚಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಮತ ಸೂಚಿಸಿರುವ ಹಿನ್ನೆಲೆಯಲ್ಲಿ ಸಭೆ ವಿಫಲವಾಗಿದೆ.
 
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಸಾರಿಗೆ ನೌಕರರ ವೇತನವನ್ನು 35 ಪ್ರತಿಶತಕ್ಕೆ ಹೆಚ್ಚಶ ಮಾಡುವಂತೆ ಒತ್ತಾಯ ಮಾಡಲಾಗಿತ್ತು. ಆದರೆ, 10 ಪ್ರತಿಶತ ವೇತನ ಹೆಚ್ಚಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಮತ ನೀಡಿದ್ದಾರೆ. ಅದಾಗ್ಯೂ ರಾಜ್ಯ ಸರಕಾರದ ಬೊಕ್ಕಸಕ್ಕೆ 1550 ಕೋಟಿ ಹೊರೆಯಾಗಲಿದೆ ಎಂದು ತಿಳಿಸಿದರು.
 
ರಾಜ್ಯದಲ್ಲಿ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಮಾತ್ರ ಲಾಭದಲ್ಲಿದೆ. ಉಳಿದ ಮೂರು ವಿಭಾಗಗಳು ನಷ್ಟದಲ್ಲಿದೆ ಎಂದು  ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ