ಶೇ.18 ರಷ್ಟು ವೇತನ ಹೆಚ್ಚಳಕ್ಕೆ ಸಾರಿಗೆ ಸಂಘಟನೆಗಳ ಪಟ್ಟು

ಬುಧವಾರ, 27 ಜುಲೈ 2016 (15:15 IST)
ಸಾರಿಗೆ ನೌಕರರು ಶೇ. 30 ರಷ್ಟು ವೇತನ ಹೆಚ್ಚಳ ಮಾಡಬೇಕೆಂದು ಆಗ್ರಹಿಸಿ ರಾಜ್ಯಾದ್ಯಂತ ಮುಷ್ಕರ ನಡೆಸುತ್ತಿದ್ದು, ಇದೀಗ 18 ಪ್ರತಿಶತ ಹೆಚ್ಚಳ ಮಾಡಿ ಎಂದು ರಾಜ್ಯ ಸರಕಾರದ ಮೊದಲ ಸುತ್ತಿನ ಮಾತುಕತೆಯಲ್ಲಿ ಬೇಡಿಕೆ ಇಟ್ಟಿದೆ ಎಂದು ಹೇಳಲಾಗುತ್ತಿದೆ.
 
ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ ಸಾರಿಗೆ ನೌಕರರ ಸಂಘಟನೆಗಳ ಜೊತೆ ಮಾತುಕತೆ ನಡೆಸಿದರು.
 
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಎಐಟಿಯುಸಿ ಪ್ರಧಾನ ಕಾರ್ಯದರ್ಶಿ ಎಚ್‌.ವಿ.ಅನಂತ್ ಸುಬ್ಬರಾವ್, ನಾವು 18 ಪ್ರತಿಶತ ವೇತನ ಹೆಚ್ಚಳ ಮಾಡಿ ಎಂದು ಸರಕಾರದ ಮುಂದೆ ಬೇಡಿಕೆ ಇಟ್ಟಿದ್ದೇವೆ. ಆದರೆ, ಸರಕಾರ 10 ಪ್ರತಿಶತಕ್ಕಿಂತ ಹೆಚ್ಚು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 
 
ಈ ಹಿನ್ನೆಲೆಯಲ್ಲಿ ಸರಕಾರದ ಜೊತೆ ಇನ್ನೊಂದು ಸುತ್ತಿನ ಸಭೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಎಐಟಿಯುಸಿ ಪ್ರಧಾನ ಕಾರ್ಯದರ್ಶಿ ಎಚ್‌.ವಿ.ಅನಂತ್ ಸುಬ್ಬರಾವ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ