ಸಾರಿಗೆ ನೌಕರರ ಮುಷ್ಕರ: ಎಸ್ಮಾ ಜಾರಿಯಾದರು ಹೆದರಲ್ಲ, ಕೆ.ಎಸ್‌.ಶರ್ಮಾ

ಸೋಮವಾರ, 25 ಜುಲೈ 2016 (10:47 IST)
ವೇತನ ಪರಿಷ್ಕರಣೆಗೆ ಆಗ್ರಹಿಸಿ ಸಾರಿಗೆ ಸಂಸ್ಥೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಎಸ್ಮಾ ಅಸ್ತ್ರ ಬಳಕೆ ಮಾಡಿದರು ನಾವು ಹೆದರಲ್ಲ ಎಂದು ಕೆಎಸ್‌ಆರ್‌ಟಿಸಿ ಮಹಾಮಂಡಳಿ ಅಧ್ಯಕ್ಷ ಕೆ.ಎಸ್‌.ಶರ್ಮಾ ಸ್ಪಷ್ಟಪಡಿಸಿದ್ದಾರೆ.
 
ವೇತನ ಪರಿಷ್ಕರಣೆಗೆ ಆಗ್ರಹಿಸಿ ಸಾರಿಗೆ ಸಂಸ್ಥೆ ನೌಕರ ಕೈಗೊಂಡ ಅನಿರ್ದಿಷ್ಟಾವಧಿ ಮುಷ್ಕರ 100ರಷ್ಟು ಯಶಸ್ವಿಯಾಗಿದೆ. ವೇತನ ಪರಿಷ್ಕರಣೆಗೆ ಆಗ್ರಹಿಸಿ ಇಂದು ಸಾರಿಗೆ ನೌಕರರು ಕೈಗೊಂಡಿರುವ ಅನಿರ್ದಿಷ್ಟಾವಧಿ ಮುಷ್ಕರ ನ್ಯಾಯಯುತವಾಗಿದೆ ಎಂದು ತಿಳಿಸಿದರು.
 
ಸಾರಿಗೆ ನೌಕರರನ್ನು ಬೆದರಿಸಲು ರಾಜ್ಯ ಸರಕಾರ ಎಸ್ಮಾ ಅಸ್ತ್ರ ಬಳಕೆ ಮಾಡುವುದಾಗಿ ತಿಳಿಸಿದೆ. ಆದರೆ, ನೌಕರರ ವಿರುದ್ಧ ಎಸ್ಮಾ ಜಾರಿ ಮಾಡಿದರು ನಾವು ಹೆದರಲ್ಲ ರಾಜ್ಯ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
 
ಅನಿರ್ದಿಷ್ಟಾವಧಿ ಮುಷ್ಕರ ಹಿನ್ನೆಲೆಯಲ್ಲಿ ಸರಕಾರಿ ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಸಿರುವುದು ಸಾರಿಗೆ ಸಂಸ್ಥೆ ನೌಕರರಲ್ಲ. ಬದಲಾಗಿ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ನಾವು ಶಾಂತಿಯುತ ಪ್ರತಿಭಟನೆಗೆ ಕರೆ ನೀಡಿದ್ದೇವೆ ಎಂದು ತಿಳಿಸಿದರು.


ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ