ಸಾರಿಗೆ ನೌಕರರ ಮುಷ್ಕರ ನ್ಯಾಯಯುತವಲ್ಲ: ಕಾಗೋಡು ತಿಮ್ಮಪ್ಪ

ಸೋಮವಾರ, 25 ಜುಲೈ 2016 (10:37 IST)
ವೇತನ ಪರಿಷ್ಕರಣೆಗೆ ಆಗ್ರಹಿಸಿ ಸಾರಿಗೆ ಸಂಸ್ಥೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿರುವುದು ನ್ಯಾಯಯುತವಲ್ಲ ಎಂದು ಸಚಿವ ಕಾಗೋಡು ತಿಮ್ಮಪ್ಪ ಹೇಳಿದ್ದಾರೆ.
 
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕಾಗೋಡು ತಿಮ್ಮಪ್ಪ, ವೇತನ ಪರಿಷ್ಕರಣೆಗೆ ಆಗ್ರಹಿಸಿ ಸಾರಿಗೆ ಸಂಸ್ಥೆ ನೌಕರರು ಕೈಗೊಂಡಿರುವ ಅನಿರ್ದಿಷ್ಟಾವಧಿ ಮುಷ್ಕರವನ್ನು ಕೈಬಿಡಿ, ಸಾರ್ವಜನಿಕರಿಗೆ ತೊಂದರೆ ಕೊಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
 
ರಾಜ್ಯ ಸರಕಾರ ನಿಯಮದಂತೆ ಸಾರಿಗೆ ನೌಕರರ ಬೇಡಿಕೆಯನ್ನು ಈಡೇರಿಸಿದೆ. ವೇತನ ಪರಿಷ್ಕರಣೆಗೆ ಆಗ್ರಹಿಸಿ ಸಾರಿಗೆ ಸಂಸ್ಥೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿರುವುದು ನ್ಯಾಯಯುತವಲ್ಲ ಎಂದು ತಿಳಿಸಿದರು.
 
ರಾಜ್ಯ ಸಾರಿಗೆ ನೌಕರರ ಬೇಡಿಕೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚೆ ನಡೆಸುತ್ತೇನೆ ಎಂದು ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ.


ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ