ಜೀರೋ ಟ್ರಾಫಿಕ್ ಮೂಲಕ ಮೈಸೂರಿನಿಂದ ಜೀವಂತ ಅಂಗಾಂಗಗಳನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನೆ

ಶುಕ್ರವಾರ, 16 ಆಗಸ್ಟ್ 2019 (11:18 IST)
ಮೈಸೂರು : ಮೈಸೂರಿನಿಂದ ವ್ಯಕ್ತಿಯೊಬ್ಬನ  ವಿವಿಧ ಜೀವಂತ ಅಂಗಾಂಗಗಳನ್ನು ಬೆಂಗಳೂರಿನ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.




ಪಿರಿಯಾಪಟ್ಟಣ ತಾಲೂಕು ಸೂಳೇಕೋಟೆ ಗ್ರಾಮದ ನಿವಾಸಿ ಧರ್ಮ ಎಸ್.ಎ (28) ರಸ್ತೆ ಅಪಘಾತದಿಂದ ತಲೆಗೆ ಪೆಟ್ಟು ಬಿದ್ದು ಕೋಮಾಗೆ ಹೋಗಿದ್ದರು. ಅವರು ಬದುಕುಳಿಯುವ ಸಾಧ್ಯತೆ ಕಡಿಮೆ ಇರುವ ಹಿನ್ನೆಲೆಯಲ್ಲಿ ಕುಟುಂಬಸ್ಥರು ಅಂಗಾಂಗ ದಾನ ಮಾಡಿದ್ದಾರೆ.


ಈ ಹಿನ್ನಲೆಯಲ್ಲಿ ಅವರ ಅಂಗಾಂಗಗಳನ್ನು ಮೈಸೂರಿನಿಂದ ಬೆಂಗಳೂರಿಗೆ ಜೀರೋ ಟ್ರಾಫಿಕ್ ಮೂಲಕ ರವಾನಿಸಲಾಗಿದ್ದು, ಧರ್ಮ ಅವರ ಹೃದಯವನ್ನು ಬೆಂಗಳೂರಿನ ನಾರಾಯಣ ಹೃದಯಾಲಯ ಆಸ್ಪತ್ರೆಗೆ, ಶ್ವಾಸಕೋಶವನ್ನು ಕೆಂಗೇರಿಯ ಬಿಜಿಎಸ್ ಆಸ್ಪತ್ರೆಗೆ, ಕಿಡ್ನಿಯನ್ನು ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ನೀಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ