ಮಾಸ್ಕ್‌ಮ್ಯಾನ್‌ಗೆ ನಡುಕ: ಧರ್ಮಸ್ಥಳಕ್ಕೆ ದೌಡಾಯಿಸಿದ ವಿಜಯೇಂದ್ರ ನೇತೃತ್ವದ ಬಿಜೆಪಿ ತಂಡ
ಎಸ್‍ಐಟಿ ತನಿಖೆಯನ್ನು ಬಿಜೆಪಿ ಪ್ರಾರಂಭದಲ್ಲೇ ಸ್ವಾಗತಿಸಿದೆ. ಅದರ ಮಧ್ಯಂತರ ವರದಿಯನ್ನು ಸರಕಾರ ಮಂಡಿಸಬೇಕು ಎಂದು ಸದನದಲ್ಲಿ ಆಗ್ರಹಿಸಿರುವುದಾಗಿ ಬಿಜೆಪಿ ಪ್ರಮುಖರು ತಿಳಿಸಿದ್ದಾರೆ. ಶ್ರೀ ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡುವ ಕುರಿತು ಕೂಡ ಸರಕಾರ ಸಮಗ್ರವಾಗಿ ತನಿಖೆ ನಡೆಸಬೇಕು ಎಂದು ಆಗ್ರಹಿಸಲಾಗಿದೆ.