ಮಹದಾಯಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸಲ್ಲಿಸಿದ ಅರ್ಜಿಯನ್ನು ಟ್ರಿಬ್ಯುನಲ್ ನ್ಯಾಯಾಧಿಕರಣ ವಜಾಗೊಳಿಸಿದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಆಕ್ರೋಶ ಭುಗಿಲೆದ್ದಿದ್ದು, ಇಂದು ಇಂದು ಕಾರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಂದ್ಗೆ ಕರೆ ನೀಡಲಾಗಿದೆ.
ಮಹದಾಯಿ ನ್ಯಾಯಾಧಿಕರಣದ ತೀರ್ಪು ಹೊರ ಬೀಳುತ್ತಿದ್ದಂತೆಯೇ ಧಾರವಾಡ, ಗದಗ್, ಬೆಳಗಾವಿ ಹಾಗೂ ಬಾಗಲಕೋಟಿಯಲ್ಲಿ ಸ್ವಯಂ ಪ್ರೇರಿತವಾಗಿ ಬಂದ್ ಮಾಡಲಾಯಿತ್ತು.
ತೀರ್ಪು ವಿರೋಧಿಸಿ ಕಳಸಾ ಬಂಡೂರಿ ಹೋರಾಟ ಸಮಿತಿ ಸೇರಿದಂತೆ ರೈತಪರ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿತ್ತು. ಇಂದು ಬಂದ್ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಧಾರವಾಡ, ಗದಗ್, ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.