ಬೆಂಗಳೂರು : ದೇಶದ 5 ಟ್ರಿಲಿಯನ್ ಡಾಲರ್ ಆರ್ಥಿಕತೆಗೆ ಕರ್ನಾಟಕ ರಾಜ್ಯದಿಂದ 1 ಟ್ರಿಲಿಯನ್ ಡಾಲರ್ ಕೊಡುಗೆ ನೀಡುವ ಗುರಿ ಹೊಂದಿದೆ.
ಅದಕ್ಕಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ನೇತೃತ್ವದ ತಂಡ ರಚಿಸಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಕರ್ನಾಟಕದಿಂದ 1 ಟ್ರಿಲಿಯನ್ ಡಾಲರ್ ಕೊಡುಗೆ ನೀಡಲು ಸರ್ಕಾರದ ಮುಖ್ಯಕಾರ್ಯದರ್ಶಿ, ಯೋಜನಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ, ಮೋಹನ್ ದಾಸ್ ಪೈ, ಎಫ್ಐಸಿಸಿಐ ಹಾಗೂ ಮೆಕೆನ್ಸಿಯ ಪ್ರತಿನಿಧಿಗಳನ್ನು ಒಳಗೊಂಡ ವಿಶೇಷ ತಂಡ ರಚಿಸಲಾಗುವುದು ಎಂದು ತಿಳಿಸಿದರು.
2025ರ ವೇಳೆಗೆ 1 ಟ್ರಿಲಿಯನ್ ಯುಎಸ್ ಡಾಲರ್ ಆರ್ಥಿಕತೆಯನ್ನು ಸಾಧಿಸುವ ಗುರಿಯೊಂದಿಗೆ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸುವುದು, ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಮಾಡುವ ಕೆಲಸವನ್ನು ಈ ತಂಡ ಮಾಡಲಿದೆ.