ಸಾಲ ನೀಡುವುದಾಗಿ ನಂಬಿಸಿ ವಂಚನೆ

ಭಾನುವಾರ, 6 ಮಾರ್ಚ್ 2022 (20:58 IST)
ಕಾನೂನು ಬಾಹಿರವಾಗಿ ಸಾರ್ವಜನಿಕರನ್ನು ಸಂಪರ್ಕಿಸಿ ಸಾಲ ನೀಡುವುದಾಗಿ ನಂಬಿಸಿ ವಂಚನೆಗೈದಿರುವ ಆರೋಪ ಕೇಳಿಬಂದಿರುವ ಹಿನ್ನೆಲೆ ಹಲವು ಆಯಪ್‍ಗಳ ವಿರುದ್ಧ ನಗರ ಸೈಬರ್ ಕ್ರೈಂ ಠಾಣಾ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ.
 
35 ಆಯಪ್‍ಗಳ ವಿರುದ್ಧ ಪೊಲೀಸರು ಒಂದೇ ಬಾರಿ 9 ಎಫ್‍ಐಆರ್ ಗಳನ್ನು ದಾಖಲಿಸಿರುವುದು ಬೆಳಕಿಗೆ ಬಂದಿದೆ.
ಆಯಪ್‍ಗಳ ಮೂಲಕ ಜನರನ್ನು ಸಂಪರ್ಕಿಸಿ ಕಡಿಮೆ ಅವಧಿಯಲ್ಲಿ ಕಡಿಮೆ ಬಡ್ಡಿಗೆ ಸಾಲದ ಆಮಿಷವೊಡ್ಡಿ, ಆ ನಂತರ ಹಣ ವಸೂಲಿ ಮಾಡುತ್ತಿರುವುದು ಗೊತ್ತಾಗಿದೆ.ಇನ್ನೂ, ಸಾರ್ವಜನಿಕರನ್ನು ಕಿರುಕುಳ ನೀಡುತ್ತಿರುವುದು ಬೆಳಕಿಗೆ ಬಂದಿರುವ ಕಾರಣ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ