ಸತ್ಯ, ಸಾಹಸ, ಬಲಿದಾನ ಇದುವೆ ಗಾಂಧಿ ಕುಟುಂಬದ ಪರಂಪರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇನ್ಸ್ಟಾ ಗ್ರಾಂನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಮೋದಿ ಉಪನಾಮದ ಹೇಳಿಕೆಗೆ ಸಂಬಂಧಿಸಿದಂತೆ ಸೂರತ್ ನ್ಯಾಯಾಲಯವು ರಾಹುಲ್ ಗಾಂಧಿ ದೋಷಿ ಎಂದು ತೀರ್ಪು ನೀಡಿದ್ದು, 2 ವರ್ಷಗಳ ಕಾಲ ಜೈಲುಶಿಕ್ಷೆ ವಿಧಿಸಿದೆ 30 ದಿನಗಳ ಜಾಮೀನಿನ ಮೇಲೆ ರಾಹುಲ್ ಹೊರಗಿದ್ದಾರೆ. ಹಾಗೆಯೇ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ರಾಜೀವ್ಗಾಂಧಿಯವರ ಪಾರ್ಥಿವ ಶರೀರವನ್ನು ಹೊತ್ತ ರಾಹುಲ್ ಗಾಂಧಿಯ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ. ಸತ್ಯ, ಧೈರ್ಯ ಮತ್ತು ತ್ಯಾಗ ಇದು ನಮ್ಮ ಪರಂಪರೆ ಮತ್ತು ಶಕ್ತಿಯೂ ಹೌದು ಎಂದಿದ್ದಾರೆ. ಏತನ್ಮಧ್ಯೆ, ಕಾಂಗ್ರೆಸ್‌ನ ಸತ್ಯಾಗ್ರಹ ಸೋಮವಾರ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಹಲವು ಜಿಲ್ಲೆಗಳ ವಿವಿಧ ರಾಜ್ಯಗಳ ಕೇಂದ್ರ ಕಚೇರಿಗಳಲ್ಲಿ ಪ್ರತಿಭಟನೆಗಳು ನಡೆಸಲು ಸಿದ್ಧತೆ ನಡೆದಿದೆ.