ಬೆಂಗಳೂರು : ತುಳು ಭಾಷೆಯನ್ನು ರಾಜ್ಯದಲ್ಲಿ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಅಧ್ಯಯನ ನಡೆಸಿ ವರದಿ ನೀಡಲು ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ನೇತೃತ್ವದ ತಂಡವನ್ನು ರಚಿಸಲಾಗಿದೆ.
ಕೇಶವ ಬಂಗೇರ, ಡಾ. ಮಾಧವ ಕೊಣಾಜೆ, ಗಣೇಶ್ ಅಮೀನ್ ಸಂಕಮಾರ್, ಪೃಥ್ವಿ ಕವತ್ತಾರು ಮಣಿಪಾಲ, ವಸಂತ ಶೆಟ್ಟಿ ಉಡುಪಿ, ಚಂದ್ರಹಾಸ ಕಣಂತೂರು, ಸಂಧ್ಯಾ ಆಳ್ವ ಅವರನ್ನು ಸದಸ್ಯರನ್ನಾಗಿ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರು ಸದಸ್ಯ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.
ಒಂದು ವಾರದಲ್ಲಿ ವರದಿ ಕೊಡುವಂತೆ ಈ ಸಮಿತಿಗೆ ಸರ್ಕಾರ ಸೂಚನೆ ನೀಡಿದೆ. ತುಳು ಭಾಷೆಗೆ ರಾಜ್ಯದ ಅಧಿಕೃತ ಭಾಷೆಯಾಗಿ ಘೋಷಿಸಬೇಕೆಂದು ಸಂಘ, ಸಂಸ್ಥೆಗಳು ಮನವಿ ಮಾಡಿದ್ದವು. ಈ ಹಿನ್ನೆಲೆಯಲ್ಲಿ ಸರ್ಕಾರ ಸಮಿತಿ ರಚಿಸಿ ಆದೇಶ ಮಾಡಿದೆ.