ತುಮಕೂರು: ಕಲುಷಿತ ನೀರು ಸೇವಿಸಿ ಆರು ಮಂದಿ ದುರ್ಮರಣ, ಕೆಲವರ ಸ್ಥಿತಿ ಚಿಂತಾಜನಕ
ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅವರು ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿ ಬಗ್ಗೆ ಅವಲೋಕಿಸಿದರು. ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಮತ್ತು ಜಿಲ್ಲಾ ಸರ್ಜನ್ ಡಾ.ಅಸ್ಗರ್ ಬೇಗ್ ಸಚಿವರ ಜೊತೆಗಿದ್ದರು. ಚಿನ್ನೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ನಿವಾಸಿಗಳಿಗೆ ಶುದ್ದ ಕುಡಿಯುವ ನೀರು ಪೂರೈಕೆಯಾಗುವಂತೆ ಕ್ರಮಕೈಗೊಳ್ಳಲು ಸಚಿವರು ಡಿಸಿಗೆ ಸೂಚಿಸಿದರು.
ಈ ಸಂಬಂಧ ಶಾಸಕ ಹಾಗೂ ಸಹಕಾರ ಸಚಿವ ಕೆ ಎನ್ ರಾಜಣ್ಣ ಕೂಡ ಆಸ್ಪತ್ರೆಗೆ ಭೇಟಿ ನೀಡಿದ್ದರು. ತಾಲೂಕಿನಾದ್ಯಂತ ಹಲವಾರು ವರ್ಷಗಳಿಂದ ಸ್ವಚ್ಛತೆ ಕಾಣದ ಓವರ್‌ಹೆಡ್ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸುವಂತೆ ಎಚ್ಚರಿಕೆ ನೀಡಿದರೂ ಅಧಿಕಾರಿಗಳು ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿದರು. ಚಿನ್ನೇನಹಳ್ಳಿ ಘಟನೆಗೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಲಾಗಿದೆ.