ತುಮಕೂರು ಶ್ರೀಗಳಿಗೆ ಭಾರತ ರತ್ನ ನೀಡಲು ಒತ್ತಾಯ

ಶುಕ್ರವಾರ, 18 ಜನವರಿ 2019 (18:29 IST)
ನಡೆದಾಡುವ ದೇವರು ಆದಷ್ಟು ಬೇಗನೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥನೆ ಸಲ್ಲಿಸಲಾಯಿತು.
ಹುಬ್ಬಳ್ಳಿಯಲ್ಲಿ ವಿವಿಧ ಸಂಘಟನೆಯ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು.

ನಗರದ ಸಾಯಿಬಾಬಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಸಿದ್ಧಗಂಗಾ ಶ್ರೀಗಳು ಬೇಗನೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥನೆ ಮಾಡಿದರು.

ಡಾ.ಶಿವಕುಮಾರ ಸ್ವಾಮೀಜಿಗಳು ಶೀಘ್ರವೇ ಗುಣಮುಖರಾಗಲಿ ಎಂದು ವಿಶೇಷ ಪೂಜೆ ಸಲ್ಲಿಸಿದ ಬಳಿಕ, ಭಾರತ ಸರ್ಕಾರ ಅವರಿಗೆ ಭಾರತ ರತ್ನ ನೀಡಲಿ ಎಂದು ಆಗ್ರಹ ಮಾಡಿದರು.  

ಶ್ರೀಗಳು ಶೀಘ್ರವೇ ಚೇತರಿಸಿಕೊಳ್ಳಬೇಕು ಹಾಗೂ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕು. ಕೇಂದ್ರ ಸರ್ಕಾರ ಈ ಬಗ್ಗೆ ಕೂಡಲೇ ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಮೂಲಕ ಪ್ರಶಸ್ತಿ ಘೋಷಣೆ ಮಾಡಬೇಕು ಎಂದು ಸದಸ್ಯರು ಒತ್ತಾಯಿಸಿದರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ