ಅವಳಿ ಬಾಂಬ್ ಸ್ಫೋಟ: ಯಾಸಿನ್ ಭಟ್ಕಳ್‌ಗೆ ಮರಣದಂಡನೆ ಶಿಕ್ಷೆ
ಸೋಮವಾರ, 19 ಡಿಸೆಂಬರ್ 2016 (18:23 IST)
ಹೈದರಾಬಾದ್‌ನ ದಿಲ್‌ಸುಖ್‌ನಗರದಲ್ಲಿ ನಡೆದ ಅವಳಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾಸಿನ್ ಭಟ್ಕಳ್ ಸೇರಿದಂತೆ ನಾಲ್ಕು ಅಪರಾಧಿಗಳಿಗೆ ಮರಣ ದಂಡನೆ ಶಿಕ್ಷೆ ವಿಧಿಸಿದೆ.
ಇಂಡಿಯನ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಸಂಸ್ಥಾಪಕ ಯಾಸಿನ್ ಭಟ್ಕಳ್ ಸೇರಿದಂತೆ ಪಾಕಿಸ್ತಾನದ ನಾಗರಿಕ ಜಿಯಾ-ಉರ್-ರೆಹಮಾನ್ ಮತ್ತಿತರ ಮೂವರಿಗೆ ಮರಣ ದಂಡನೆ ಶಿಕ್ಷೆ ನೀಡಿ ಎನ್‌ಐಎ ಕೋರ್ಟ್ ತೀರ್ಪು ನೀಡಿದೆ.
ತೀರ್ಪಿನ ಹಿನ್ನೆಲೆಯಲ್ಲಿ ಎಲ್ಲ ಐವರು ಆರೋಪಿಗಳನ್ನು ನ್ಯಾಯಾಲಯದ ಎದುರು ಹಾಜರುಪಡಿಸಲಾಗಿತ್ತು. ಈಗಾಗಲೇ ಐವರು ಆರೋಪಿಗಳನ್ನು ಅಪರಾಧಿಗಳ ಎಂದು ತೀರ್ಪು ನೀಡಿದ್ದ ಎನ್‌ಐಎ ಕೋರ್ಟ್, ಶಿಕ್ಷೆ ಪ್ರಮಾಣದ ಕುರಿತು ತೀರ್ಪನ್ನು ಕಾಯ್ದಿರಿಸಿತ್ತು.
2013ರ ಫೆಬ್ರವರಿ 21ರಂದು ಹೈದರಾಬಾದ್‌ನ ದಿಲ್‌ಸುಖ್‌ನಗರದಲ್ಲಿ ಅವಳಿ ಬಾಂಬ್ ಸ್ಫೋಟ ನಡೆದಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ