ಕಲಬುರಗಿಯಲ್ಲಿ ಮತ್ತೆರಡು ಕೊರೋನಾ ಪಾಸಿಟಿವ್ ಕೇಸ್ ಪತ್ತೆ
ಕೊರೋನಾ ಸೋಂಕಿನಿಂದ ಕಳೆದ ಏಪ್ರಿಲ್ 7 ರಂದು ಮೃತಪಟ್ಟಿದ್ದ ಕಲಬುರಗಿಯ 65 ವರ್ಷದ ವ್ಯಕ್ತಿಯ ನೇರ ಸಂಪರ್ಕದಲ್ಲಿ ಬಂದಿರುವ ಇಬ್ಬರಲ್ಲಿ ಕೋವಿಡ್ – 19 ಪತ್ತೆಯಾಗಿದೆ.
ಪ್ರಸ್ತುತ ಈ ಇಬ್ಬರು ಸೋಂಕಿತರು ಕಲಬುರಗಿ ಇ.ಎಸ್.ಐ.ಸಿ. ಆಸ್ಪತ್ರೆಯ ಐಸೋಲೇಷನ್ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದರಿಂದ ಜಿಲ್ಲೆಯಲ್ಲಿ ಇದೂವರೆಗೆ ಕೊರೋನಾ ಪಾಸಿಟಿವ್ ಸಂಖ್ಯೆ 12ಕ್ಕೆ ಏರಿದಂತಾಗಿದ್ದು, ಇದರಲ್ಲಿ ಇಬ್ಬರು ವ್ಯಕ್ತಿಗಳು ನಿಧನರಾದರೆ ಇಬ್ಬರು ವ್ಯಕ್ತಿಗಳು ಕೊರೋನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ ಎಂದು ಡಿ.ಸಿ.ಶರತ್ ಬಿ. ತಿಳಿಸಿದ್ದಾರೆ.