ಶಾಮರಾವ್(65), ಮೋತಿಬಾಯಿ(55) ಮೃತಪಟ್ಟವರು. ಕಾಳಗಿಯಿಂದ ಚಿಂಚೊಳಿಗೆ ವೇಗವಾಗಿ ತೆರಳುತ್ತಿದ್ದ ವೇಳೆ ಕ್ರೂಸರ್ ವಾಹನದ ಟೈರ್ ಸ್ಫೋಟಗೊಂಡಿದೆ. ಪರಿಣಾಮ ಕ್ರೂಸರ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೆ ಸಾವನಪ್ಪಿದ್ದಾರೆ. 10 ಮಂದಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ.