ಹೆಜ್ಜೇನು ದಾಳಿಗೆ ಇಬ್ಬರು ಗಂಭೀರ ಗಾಯ

ಮಂಗಳವಾರ, 27 ನವೆಂಬರ್ 2018 (19:14 IST)
ಎರಡು ಕಡೆ ಹೆಜ್ಜೇನು ದಾಳಿ ನಡೆಸಿರುವ ಪ್ರಕರಣ ವರದಿಯಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನಲ್ಲಿ ಈ ಘಟನೆ ನಡೆದಿದೆ. ಲಂಕೇನಹಳ್ಳಿ ಗ್ರಾಮದ ಹನುಮಂತರಾಯಪ್ಪ(70) ಮತ್ತು ಗಂಗಮ್ಮ(75) ಗಾಯಗೊಂಡಿದ್ದಾರೆ.

ತುಮಕೂರು ಜಿಲ್ಲಾ ಆಸ್ಪತ್ರೆಗೆ ಗಾಯಾಳುಗಳನ್ನು ಚಿಕಿತ್ಸೆಗೆ ದಾಖಲು ಮಾಡಲಾಗಿದೆ. ಗಂಗಮ್ಮನಿಗೆ ಕೊರಟಗೆರೆ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಹೆಜ್ಜೇನು ದಾಳಿ ಪ್ರಕರಣಗಳು ಮರುಕಳಿಸುತ್ತಿದ್ದು ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ