ಬೆಂಗಳೂರಿನಲ್ಲಿ ಕಟ್ಟಡ ಕುಸಿದು ಇಬ್ಬರು ಸಾವು
ಬೆಂಗಳೂರಿನಲ್ಲಿ ಬಿಲ್ಡಿಂಗ್ ಕುಸಿದು ಇಬ್ಬರು ಕಾರ್ಮಿಕರು ಸಾವನಪ್ಪಿದ್ದಾರೆ. ಮೂರು ಮಂದಿ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬಿಲ್ಡಿಂಗ್ ಅಡಿ ಸಿಲುಕಿದ್ದ ಮೂವರನ್ನು ಹೊರ ತೆಗೆದ್ರು. ಬೆಂಗಳೂರಿನ ವೈಟ್ ಫೀಲ್ಡ್ ಬಳಿಯಲ್ಲಿ BLR ಕಂಪನಿಗೆ ಸೇರಿದ ಕಟ್ಟಡ ತೆರವು ಮಾಡಲಾಗುತ್ತಿತ್ತು. ಕಾರ್ಮಿಕರು ಇಲ್ಲೇ ವಾಸ್ತವ್ಯ ಹೂಡಿದ್ದು, ರಾತ್ರಿ ಕಟ್ಟಡದ ಕೆಳಗೆ ಮಲಗಿದ್ದಾಗ ಈ ಅವಘಡ ಸಂಭವಿಸಿದೆ. ಬಿಹಾರ ಮೂಲದ ಜೈನುದ್ದೀನ್, ಹರಮಾನ್ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಮಹಾದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.