ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ: ಗರ್ಭಿಣಿಯಾದ ಅಪ್ರಾಪ್ತೆ
ಮೈಸೂರು: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ ವ್ಯಕ್ತಿಯೋರ್ವ ಅತ್ಯಾಚಾರವೆಸಗಿದ್ದಾನೆ. ಈ ವಿಷಯವನ್ನು ಊರಿನವರಿಗೆ ತಿಳಿಸಬೇಕಾಗುತ್ತದೆ ಎಂದು ಮತ್ತೊಬ್ಬ ಅತ್ಯಾಚಾರವೆಸಗಿದ್ದಾನೆ. ಇದರಿಂದಾಗಿ ಅಪ್ರಾಪ್ತೆ ಗರ್ಭಿಣಿಯಾಗಿರುವ ಘಟನೆ ಟಿ.ನರಸೀಪುರದಲ್ಲಿ ನಡೆದಿದೆ.
ಸದ್ಯ ಅಪ್ರಾಪ್ತೆ ಈಗ ಗರ್ಭಿಣಿಯಾಗಿದ್ದಾಳೆ. ಅಪ್ರಾಪ್ತೆ ಗರ್ಭಿಣಿ ಎಂಬ ವಿಷಯ ತಿಳಿದ ಇಬ್ಬರೂ ಆರೋಪಿಗಳು ಕಾಲೋನಿ ಬಿಟ್ಟು ಪರಾರಿಯಾಗಿದ್ದಾರೆ. ನೊಂದ ಅಪ್ರಾಪ್ತೆ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಕಾಮುಕರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾಳೆ.