ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಸೋಮವಾರ, 8 ನವೆಂಬರ್ 2021 (21:22 IST)
ರಾಜ್ಯದಲ್ಲಿ ಇನ್ನೂ ಎರಡು ದಿನ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡು, ಉತ್ತರ ಒಳನಾಡು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ. ಚಾಮರಾಚನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ,ಶಿವಮೊಗ್ಗದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಗಳಿವೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ.
ಸಾಮಾನ್ಯವಾಗಿ ಮೋಡಕವಿದ ವಾತಾವರಣವಿದ್ದು, ಗರಿಷ್ಠ ತಾಪಮಾನ 26 ಮತ್ತು 19 ಡಿಗ್ರಿ ಸೆಲ್ಸಿಯಸ್ ಇರಲಿದೆ.