ತರಕಾರಿ ಹೆಸರಿನಲ್ಲಿ ಸಿಗರೇಟ್ ಸಾಗಿಸುತ್ತಿದ್ದ ಇಬ್ಬರ ಬಂಧನ

ಗುರುವಾರ, 9 ಏಪ್ರಿಲ್ 2020 (11:06 IST)

ಚಾಮರಾಜನಗರ : ತರಕಾರಿ ಹೆಸರಿನಲ್ಲಿ ಸಿಗರೇಟ್ ಸಾಗಿಸುತ್ತಿದ್ದ ಇಬ್ಬರನ್ನು ಪುಣಜನೂರು ಚೆಕ್ ಪೋಸ್ಟ್ ಬಳಿ ಬಂಧಿಸಲಾಗಿದೆ.

 

ಲಾಕ್ ಡೌನ್ ನಿಯಮ ಉಲ್ಲಂಘಿಸಿ ಬೆಂಗಳೂರಿನ ನಂದಿನಿ ಲೇಔಟ್ ನಲ್ಲಿ ತರಕಾರಿ ಮಾರಾಟ ಮಾಡುತ್ತಿದ್ದ ಖದೀಮರು ತಮಿಳುನಾಡಿನಿಂದ ಕರ್ನಾಟಕಕ್ಕೆ ಸಾಗಿಸುವ ವೇಳೆ ಚಾಮರಾಜನಗರ ತಾಲೂಕಿನ ಪುಣಜನೂರು ಚೆಕ್ ಪೋಸ್ಟ್ ಬಳಿ ಸಿಕ್ಕಿ ಬಿದ್ದಿದ್ದಾರೆ.

 

ಧಾರವಾಡದ ಉಪನಗರ ಠಾಣೆಯ ಪೊಲೀಸರಿಂದ ವಶಕ್ಕೆ ಪಡೆದು ತಪಾಸಣೆ ಮಾಡುವ ವೇಳೆ ತರಕಾರಿ ಜೊತೆ ಸಿಗರೇಟುಗಳು ಪತ್ತೆಯಾಗಿದ್ದು, ಕಂಟೇನರ್ ವಶಕ್ಕೆ ಪಡೆದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ