ಮೃತ ಕಾರ್ಮಿಕರನ್ನು ಕಾಚಿಕ್ಕಯ್ಯ (65) ಹಾಗೂ ಈರಯ್ಯ (68) ಎಂದು ಗುರುತಿಸಲಾಗಿದೆ. ಕಡೆಗರ್ಜೆಯ ತೋಟದಲ್ಲಿ ಶುಕ್ರವಾರ ಬೆಳಿಗ್ಗೆ ಕೆಲಸ ಮಾಡುವ ವೇಳೆ ಒಂಟಿ ಸಲಗ ದಾಳಿ ಮಾಡಿ ಇಬ್ಬರನ್ನು ಬಲಿ ಪಡೆದಿದ್ದು, ಈ ಘಟನೆಯಿಂದಾಗಿ ಗ್ರಾಮಸ್ಥರು ಭಯಭೀತರಾಗಿದ್ದಾರೆ. ತಮ್ಮವರನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಕಾಡಾನೆ ನಿಯಂತ್ರಣಕ್ಕೆ ಅರಣ್ಯ ಇಲಾಖೆ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು,ಮೃತ ಕಾರ್ಮಿಕರಿಗೆ ಪರಿಹಾರದ ಜೊತೆಗೆ ಕಾಡಾನೆಗಳನ್ನು ಕೂಡಲೇ ಸ್ಥಳಾಂತರಿಸಬೇಕು ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ.