ಕರ್ನಾಟಕದಲ್ಲಿ ರಾಹುಲ್ ಗಾಂಧಿ ಮ್ಯಾಜಿಕೋ, ಸಿದ್ದರಾಮಯ್ಯ ಬಲವೋ?

ಸೋಮವಾರ, 18 ಡಿಸೆಂಬರ್ 2017 (10:47 IST)
ಬೆಂಗಳೂರು: ಗುಜರಾತ್ ಮತ್ತು ಹಿಮಾಚಲ ಪ್ರದೇಶ ಚುನಾವಣೆ ಫಲಿತಾಂಶ ನೋಡಿದ ಮೇಲೆ ಕರ್ನಾಟಕ ಚುನಾವಣೆಗೆ ಕಾಂಗ್ರೆಸ್ ಯಾರ ನಾಯಕತ್ವದಲ್ಲಿ ರೆಡಿಯಾಗುತ್ತದೆ?
 

ಈ ಪ್ರಶ್ನೆಗೆ ಖಾಸಗಿ ಮಾಧ್ಯಮವೊಂದರಲ್ಲಿ ಸಚಿವ ಯುಟಿ ಖಾದರ್ ಉತ್ತರಿಸಿದ್ದಾರೆ. ಗುಜರಾತ್ ನಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗೆದ್ದರೂ ಕಾಂಗ್ರೆಸ್ ಹೆಚ್ಚಿನ ಸ್ಥಾನ ಗಳಿಸಿರುವುದು ನೋಡಿದರೆ ಅಲ್ಲಿ ಆಡಳಿತ ವಿರೋಧಿ ಅಲೆ ಎದ್ದಿದೆ ಎನ್ನುವುದು ಸ್ಪಷ್ಟವಾಗುತ್ತದೆ. ರಾಹುಲ್ ಗಾಂಧಿ ವರ್ಚಸ್ಸು ಹೆಚ್ಚಿದೆ ಎಂದು ಖಾದರ್ ಹೇಳಿದ್ದಾರೆ.

ಹಾಗಿದ್ದರೆ ಕರ್ನಾಟಕ ವಿಧಾನಸಭೆ ಚುನಾವಣೆಗೆ ರಾಹುಲ್ ನಾಯಕತ್ವದಲ್ಲಿ ಮುನ್ನಡೆಯುತ್ತೀರೋ ಇಲ್ಲಾ, ಸಿಎಂ ಸಿದ್ದರಾಮಯ್ಯ ಹೆಸರು ಹೇಳಿಕೊಂಡೇ ಪ್ರಚಾರ ಮಾಡುತ್ತೀರೋ ಎಂದು ಕೇಳಿದಾಗ ರಾಹುಲ್ ಮಾರ್ಗದರ್ಶನದಲ್ಲಿ ಸಿದ್ದರಾಮಯ್ಯನವರ ಒಳ್ಳೆಯ ಜನ ಪರ ಯೋಜನೆಗಳ ಬಲದಿಂದಲೇ ಚುನಾವಣೆ ಎದುರಿಸುವುದಾಗಿ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ