ಚುನಾವಣಾ ಆಯೋಗದ ನಿರ್ಧಾರ ಪ್ರಶ್ನಿಸಿದ ಉದ್ಧವ್

ಸೋಮವಾರ, 20 ಫೆಬ್ರವರಿ 2023 (17:26 IST)
ಶಿವಸೇನೆಯ ಚಿಹ್ನೆಯ ವಿವಾದವು ಇದೀಗ ಸುಪ್ರೀಂಕೋರ್ಟ್​ ತಲುಪಿದೆ. ಶಿವಸೇನೆ ವರ್ಸಸ್ ಶಿವಸೇನೆ ನಡುವಿನ ಕಾನೂನು ಹೋರಾಟದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಬಣಕ್ಕೆ ಗೆಲುವು ಸಿಕ್ಕಿದ್ದು, ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ತೀವ್ರ ಮುಖಭಂಗವಾಗಿದೆ. ಕೇಂದ್ರ ಚುನಾವಣಾ ಆಯೋಗ ಶಿವಸೇನೆಯ ಮೂಲ ಚಿಹ್ನೆಯಾದ ‘ಬಿಲ್ಲು ಬಾಣ’ವನ್ನು ಶಿಂದೆ ಬಣಕ್ಕೆ ನೀಡುವ ಮೂಲಕ ಶಿಂದೆ ಬಣವೇ ನಿಜವಾದ ಶಿವಸೇನೆ ಎಂದು ಘೋಷಿಸಿತ್ತು. ಶಿಂದೆ ಬಣಕ್ಕೆ ಚುನಾವಣಾ ಚಿಹ್ನೆ ‘ಬಿಲ್ಲು-ಬಾಣ’ ನೀಡುವ ಚುನಾವಣಾ ಆಯೋಗದ ನಿರ್ಧಾರವನ್ನು ಶಿವಸೇನೆ (ಉದ್ಧವ್ ಠಾಕ್ರೆ ಬಣ) ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದೆ. ಉದ್ಧವ್ ಬಣದ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಸಿಜೆಐ ಅವರಿಂದ ಈ ವಿಷಯದ ಬಗ್ಗೆ ಶೀಘ್ರವಾಗಿ ವಿಚಾರಣೆಗೆ ಒತ್ತಾಯಿಸಿದ್ದಾರೆ. ತಮ್ಮ ಬಣವವೇ ನಿಜವಾದ ಶಿವಸೇನಾ ಎಂದು ಪರಿಗಣಿಸಿ ಪಕ್ಷದ ಚುನಾವಣಾ ಚಿಹ್ನೆಯನ್ನು ನೀಡುವಂತೆ ಏಕನಾಥ ಶಿಂದೆ ಬಣ ಹಾಗೂ ಉದ್ಧವ್ ಠಾಕ್ರೆ ಬಣ ಚುನಾವಣಾ ಆಯೋಗದ ಮೊರೆ ಹೋಗಿದ್ದವು. ಆಯೋಗ ಅಂತಿಮವಾಗಿ ಬಿಲ್ಲು ಬಾಣ’ ಚಿಹ್ನೆಯನ್ನು ಶಿಂಧೆ ಬಣಕ್ಕೆ ನೀಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ