ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಒಂದು ಕೋಟಿ ದೇಣಿಗೆ ನೀಡಿದ ಉದ್ಧವ್ ಠಾಕ್ರೆ

ಶನಿವಾರ, 7 ಮಾರ್ಚ್ 2020 (19:42 IST)
ಬಿಜೆಪಿಗೆ ಸೆಡ್ಡು ಹೊಡೆಯುವಂತೆ ನಡೆದುಕೊಳ್ಳುತ್ತಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಮತ್ತೆ ದಿಟ್ಟ ಹೆಜ್ಜೆ ಇಟ್ಟಿದ್ದಾರೆ.


ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಲು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಒಂದು ಕೋಟಿ ರೂಪಾಯಿ ದೇಣಿಗೆ ಘೋಷಣೆ ಮಾಡಿದ್ದಾರೆ.

ಅಯೋಧ್ಯೆಗೆ ಭೇಟಿ ನೀಡಿದ್ದ ಉದ್ಧವ್ ಠಾಕ್ರೆ ರಾಮಲಲ್ಲಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಕೆ ಮಾಡಿದರು.
ಮಹಾರಾಷ್ಟ್ರ ಸರಕಾರದಿಂದ ದೇಣಿಗೆ ನೀಡುವುದಿಲ್ಲ. ತಮ್ಮ ಟ್ರಸ್ಟ್ ವತಿಯಿಂದ ದೇಣಿಗೆ ನೀಡುವುದಾಗಿ ಸ್ಪಷ್ಟಪಡಿಸಿದರು.

ರಾಮ ಮಂದಿರ ನಿರ್ಮಾಣ ಕೆಲಸದಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದ ಅವರು, ಬಿಜೆಪಿ ಹಿಂದುತ್ವ ತ್ಯಜಿಸಿ ಬಹಳ ಸಮಯವಾಗಿದೆ ಅಂತ ಉದ್ಧವ್ ಠಾಕ್ರೆ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ