ಉಮೇಶ್ ಜಾಧವ ಎಫೆಕ್ಟ್: ಖರ್ಗೆ ಕ್ಷೇತ್ರದಲ್ಲಿ ಪಕ್ಷಾಂತರ ಪರ್ವ ಶುರು
ಬುಧವಾರ, 13 ಮಾರ್ಚ್ 2019 (15:41 IST)
ಲೋಕಸಭೆ ಚುನಾವಣೆಯ ಸಿದ್ಧತೆಗಳನ್ನು ಎಲ್ಲ ಪಕ್ಷಗಳು ಬಿರುಸುಗೊಳಿಸಿವೆ. ಇತ್ತ ಬಿಸಿಲೂರು ಖ್ಯಾತಿಯ ನಾಡಿಯಲ್ಲಿ ಪಕ್ಷಾಂತರ ಪರ್ವ ಶುರುವಾಗಿದೆ.
ಕಲಬುರ್ಗಿಯಲ್ಲಿ ಮಾತೃಪಕ್ಷ ಕಾಂಗ್ರೆಸ್ ಗೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶ್ರೀನಿವಾಸ್ ಸಾಗರ್ ಮರಳಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಕಳೆದ ಜಿಲ್ಲಾ ಪಂಚಾಯಿತಿ ಚುನಾವಣೆ ವೇಳೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಸಗರ್, ಚಿತ್ತಾಪುರ ತಾಲೂಕಿನ ರಾವೂರು ಗ್ರಾಮದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.
ಪಕ್ಷದ ಧ್ವಜ ನೀಡೋ ಮೂಲಕ ಬರಮಾಡಿಕೊಂಡ ಪ್ರಿಯಾಂಕ್ ಖರ್ಗೆ, ಸಗರ್ ಜೊತೆ ಅವರ ಬೆಂಬಲಿಗರನ್ನು ಕಾಂಗ್ರೆಸ್ ಸೇರ್ಪಡೆ ಮಾಡಿಕೊಂಡರು.
ಚಿಂಚೋಳಿ ಶಾಸಕ ಉಮೇಶ್ ಜಾಧವ್ ಪಕ್ಷಾಂತರದ ನಂತರ ಎಚ್ಚೆತ್ತಿರುವ ಕಾಂಗ್ರೆಸ್, ಪಕ್ಷ ಬಿಟ್ಟು ಹೋದವರನ್ನು ವಾಪಸ್ ಕರೆತರೋ ಪ್ರಯತ್ನ ನಡೆಸಿರುವುದು ಇದರಿಂದ ಸಾಬೀತಾದಂತಾಗಿದೆ. ಮತ್ತಷ್ಟು ನಾಯಕರನ್ನು ಕಾಂಗ್ರೆಸ್ ಗೆ ಕರೆತರುವಲ್ಲಿ ಕೈ ನಾಯಕರು ತಲ್ಲೀನರಾಗಿದ್ದಾರೆ.