ವೀರಶೈವ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಗುರುವಾರ, 14 ಮಾರ್ಚ್ 2019 (16:57 IST)
ವೀರಶೈವ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರಾಗಿ ಶಾಮನೂರು ಶಿವಶಂಕರಪ್ಪ ಅವಿರೋಧ ಆಯ್ಕೆ ಆಗಿದ್ದಾರೆ.

ಪ್ರತಿಷ್ಠಿತ ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರಾಗಿ ಶಾಸಕ ಶಾಮನೂರು ಶಿವಶಂಕರಪ್ಪ  ಅವರು ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. 

ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಬುಧವಾರ ಕೊನೆಯ ದಿನವಾಗಿತ್ತು. 
ಅಧ್ಯಕ್ಷ ಸ್ಥಾನಕ್ಕೆ ಯಾರೂ ನಾಮಪತ್ರ ಸಲ್ಲಿಸದೆ ಇರುವುದರಿಂದ ಶಾಮನೂರು ಶಿವಶಂಕರಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 

ಶೀಘ್ರ ಈ ಕುರಿತು ಅಧಿಕೃತ ಪ್ರಟಕಣೆಯಾಗಲಿದೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ