ಭೂಗತ ಪಾತಕಿ ರವಿ ಪೂಜಾರಿ ಸೆನಗಲ್‍ ನಿಂದ ಪಾರಾರಿ

ಸೋಮವಾರ, 10 ಜೂನ್ 2019 (10:55 IST)
ಬೆಂಗಳೂರು : ಕರಾವಳಿ ಮೂಲದ ಭೂಗತ ಪಾತಕಿ ರವಿ  ಪೂಜಾರಿ ಪಶ್ಚಿಮ ಆಫ್ರಿಕಾದ ಸೆನಗಲ್‍ ನಿಂದ ಪರಾರಿಯಾಗಿದ್ದಾನೆ ಎಂಬುದಾಗಿ ತಿಳಿದುಬಂದಿದೆ.




ನಕಲಿ ಪಾಸ್‍ಪೋರ್ಟ್ ಆರೋಪದಡಿ ಪಶ್ಚಿಮ ಆಫ್ರಿಕಾದ ಸೆನಗಲ್‍ನಲ್ಲಿ 4 ತಿಂಗಳ ಹಿಂದೆ ಬಂಧನಕ್ಕೊಳಗಾಗಿದ್ದ ರವಿ  ಪೂಜಾರಿ ಅಂತಾರಾಷ್ಟ್ರೀಯ ಕಾನೂನಿನ ಪ್ರಕಾರ ಜಾಮೀನು ಪಡೆದು ಶನಿವಾರ ಜೈಲಿನಿಂದ ಬಿಡುಗಡೆಯಾಗಿ ಸೆನೆಗಲ್ ಬಿಟ್ಟು ಪರಾರಿಯಾಗಿದ್ದಾನೆ ಎಂದು ಸೆನೆಗಲ್ ಪತ್ರಿಕೆಗಳು ವರದಿ ಮಾಡಿವೆ.


ಆದರೆ ಹಿರಿಯ ಪೊಲೀಸ್ ಅಧಿಕಾರಿಗಳು ಈ ಕುರಿತು ಮಾಹಿತಿ ನೀಡಲು ನಿರಾಕರಿಸಿದ್ದು, ರವಿ ಪೂಜಾರಿ ಸೆನೆಗಲ್‍ ನಿಂದ ಪರಾರಿಯಾಗಿದ್ದಾನೆ ಎಂದು ಅಧಿಕೃತವಾಗಿ ಹೇಳಿಕೆ ನೀಡಿಲ್ಲ. ಒಟ್ಟಿನಲ್ಲಿ ಹಲವಾರು ಪ್ರಕರಣಗಳಲ್ಲಿ ಭಾರತಕ್ಕೆ ಬೇಕಾಗಿದ್ದ ರವಿ ಪೂಜಾರಿಯನ್ನು ಕಾನೂನು ಹೋರಾಟದಡಿ ಗಡೀಪಾರು ಮಾಡುವ ಭಾರತದ ಪೊಲೀಸರ ಪ್ರಯತ್ನಕ್ಕೆ ತಣ್ಣೀರು ಬಿದ್ದಂತಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ