ವಾಸಕ್ಕೆ ಯೋಗ್ಯವಲ್ಲ ಎನ್ನುವ ಅಯೋಗ್ಯ ಜನರು ಬೆಂಗಳೂರಿಗೆ ಬರಬೇಡಿ : ಮುನಿರತ್ನ
ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಬೆಂಗಳೂರನ್ನು ಬೈಯ್ಯುವ ಜನರು ತಿಂದ ತಟ್ಟೆಯಲ್ಲೇ ಹೇಸಿಗೆ ಮಾಡುತ್ತಾರೆ ಎನ್ನುವ ಗಾದೆ ರೀತಿಯೇ ಮಾಡುತ್ತಿದ್ದಾರೆ.
ಅದೇ ರೀತಿ ಬೆಂಗಳೂರನ್ನು ತೆಗಳುವವರು ನೀಚ ಸಂಸ್ಕೃತಿಗೆ ಸೇರುತ್ತಾರೆ. ಬೆಂಗಳೂರಲ್ಲೇ ಇದ್ದು, ಬೆಂಗಳೂರಿನ ಅನ್ನವನ್ನೇ ತಿಂದು, ನಂತರ ಬೆಂಗಳೂರಿಗೆ ಬೈಯ್ಯುತ್ತಿದ್ದಾರೆ. ಈ ರೀತಿಯಾಗಿ ಯಾರು ಬೈಯ್ಯುತ್ತಿದ್ದಾರೋ ಅವರಿಂದಲೇ ಬೆಂಗಳೂರು ಹಾಳಾಗಿದೆ ಎಂದು ಕಿಡಿಕಾರಿದರು.