ಸೀಡಿ ಕೇಸ್ ತನಿಖಾಧಿಕಾರಿ ಸೇರಿ 6 ಮಂದಿಗೆ ಕೇಂದ್ರ ಗೃಹ ಸಚಿವರ ಪದಕ
ಶುಕ್ರವಾರ, 13 ಆಗಸ್ಟ್ 2021 (14:58 IST)
ಬೆಂಗಳೂರು(ಆ.13): ಅಪರಾಧ ಪ್ರಕರಣಗಳ ಉತ್ತಮ ತನಿಖೆಗೆ ನೀಡುವ ಕೇಂದ್ರ ಗೃಹ ಸಚಿವರ ಪದಕ-2021ಕ್ಕೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿ.ಡಿ. ಸ್ಫೋಟ ಪ್ರಕರಣದ ತನಿಖಾಧಿಕಾರಿ ಎಚ್.ಎಂ.ಧರ್ಮೇಂದ್ರ ಸೇರಿದಂತೆ ಆರು ಮಂದಿ ಪೊಲೀಸರು ಭಾಜನರಾಗಿದ್ದಾರೆ.
ಸಿಸಿಬಿ ಎಸಿಪಿ ಎಚ್.ಎನ್.ಧರ್ಮೇಂದ್ರ, ಮಂಗಳೂರು ಉಪ ವಿಭಾಗದ ಡಿವೈಎಸ್ಪಿ ಪರಮೇಶ್ವರ ಹೆಗಡೆ, ಬಿಡಿಎ ಡಿವೈಎಸ್ಪಿ ಸಿ.ಬಾಲಕೃಷ್ಣ, ಕೆಐಎ ಎಸ್ಐಟಿ ಮನೋಜ್ ಎನ್.ಹೂವಳೆ, ದಾವಣಗೆರೆ ಜಿಲ್ಲೆ ಹೊನ್ನಾಳಿ ಇನ್ಸ್ಪೆಕ್ಟರ್ ಟಿ.ವಿ.ದೇವರಾಜ್ ಹಾಗೂ ಹಳೆ ಹುಬ್ಬಳ್ಳಿ ಠಾಣೆ ಇನ್ಸ್ಪೆಕ್ಟರ್ ಶಿವಪ್ಪ ಶೆಟ್ಟಿಪ್ಪ ಕಮಟಗಿ ಅವರು ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.