ಕೇಂದ್ರ ಸಚಿವ ಕುಮಾರಸ್ವಾಮಿ ಖಾಲಿ ಟ್ರಂಕ್ ಇದ್ದಂತೆ: ಡಿಸಿಎಂ ಡಿ.ಕೆ. ಶಿವಕುಮಾರ್ ಗುಡುಗು

Sampriya

ಭಾನುವಾರ, 26 ಅಕ್ಟೋಬರ್ 2025 (12:17 IST)
ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಖಾತಾಗೆ ಪರಿವರ್ತನೆ ಸಂಬಂಧಿಸಿದಂತೆ ಸರ್ಕಾರದ ನಡೆಯನ್ನು ಟೀಕಿಸಿದ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುಡುಗಿದ್ದಾರೆ.

ಬಿ ಖಾತಾ ಆಸ್ತಿಗಳನ್ನು ಎ ಖಾತಾಗೆ ಪರಿವರ್ತನೆ ಮಾಡುತ್ತಿರುವ ಬಗ್ಗೆ ಸುಖಾಸುಮ್ಮನೆ ಟೀಕೆ ಮಾಡುತ್ತಿರುವ ಎಚ್‌.ಡಿ. ಕುಮಾರಸ್ವಾಮಿ ಖಾಲಿ ಟ್ರಂಕ್ ಇದ್ದಂತೆ ಎಂದು  ಶಿವಕುಮಾರ್ ಅವರು ವಾಗ್ದಾಳಿ ನಡೆಸಿದರು. ಕಬ್ಬನ್ ಪಾರ್ಕ್ ನಲ್ಲಿ ಭಾನುವಾರ ನಡೆದ ಬೆಂಗಳೂರು ನಡಿಗೆ ಕಾರ್ಯಕ್ರಮದ ವೇಳೆ ಅವರು ಸಾರ್ವಜನಿಕರ ಜೊತೆ ಮಾತನಾಡಿದರು.

ಸರ್ಕಾರ ಎಲ್ಲಾ ಆಸ್ತಿಗಳನ್ನು ಎ ಖಾತಾ ಆಗಿ ಪರಿವರ್ತನೆ ಮಾಡುತ್ತಿರುವುದು ಒಳ್ಳೆಯ ಕೆಲಸ. ಈ ಪರಿವರ್ತನೆಗಾಗಿ ಅನೇಕರು, ಹಲವು ವರ್ಷಗಳಿಂದ ಕಾಯುತ್ತಿದ್ದರು ಎಂದು ನಾಗರಿಕರೊಬ್ಬರು ಸರ್ಕಾರದ ತೀರ್ಮಾನವನ್ನು ಸ್ವಾಗತಿಸಿ, ಮುಕ್ತವಾಗಿ ಪ್ರಶಂಸಿದರು.

ಎ ಖಾತಾ ನಿಮ್ಮ ಆಸ್ತಿ ದಾಖಲೆ. ಸಾರ್ವಜನಿಕರ ಆಸ್ತಿ ದಾಖಲೆಗಳನ್ನು ಸರಿಪಡಿಸಿ, ಅವುಗಳನ್ನು ಜನರಿಗೆ ನೀಡುವುದು ನಮ್ಮ ಸರ್ಕಾರದ ಆರನೇ ಗ್ಯಾರಂಟಿ. ಇದಕ್ಕಾಗಿ ನಾವು ಕೇವಲ ಶೇ 5 ಮಾತ್ರ ಅಭಿವೃದ್ಧಿ ಶುಲ್ಕ ಪಾವತಿ ಮಾಡುವಂತೆ ಕೇಳಿದ್ದೇವೆ. ನಿಮ್ಮಂತಹ ಪ್ರಜ್ಞಾವಂತ ನಾಗರಿಕರು ಇದನ್ನು ಸ್ವಾಗತಿಸಿರುವುದಕ್ಕೆ ಧನ್ಯವಾದ ಎಂದು ಶಿವಕುಮಾರ್‌ ಪ್ರತಿಕ್ರಿಯಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ