ಮುಷ್ಕರ ವಾಪಸ್ ಪಡೆದ ನೌಕರರ ಸಂಘ
ಸರ್ಕಾರದ ಶೇಕಡಾ 17ರಷ್ಟು ವೇತನ ಹೆಚ್ಚಳ ಆದೇಶವನ್ನು ರಾಜ್ಯ ಸರ್ಕಾರಿ ನೌಕರರ ಸಂಘ ಸ್ವಾಗತಿಸಿದ್ದು, ಈ ಮೂಲಕ ಮುಷ್ಕರವನ್ನು ವಾಪಸ್ ಪಡೆದುಕೊಂಡಿದೆ. 7ನೇ ವೇತನ ಆಯೋಗ ವರದಿ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ರಾಜ್ಯಾದ್ಯಂತ ಇಂದು ಮುಷ್ಕರ ನಡೆಸಿದ್ದರು. ಇದರಿಂದ ರಾಜ್ಯದಲ್ಲಿ ಸರ್ಕಾರಿ ಸೇವೆಗಳಲ್ಲಿ ವ್ಯತ್ಯಯವಾಗಿದ್ದು ಭಾರೀ ಸಮಸ್ಯೆಗಳು ಎದುರಾಗಿದ್ದವು. ಸದ್ಯ ಈ ಬಗ್ಗೆ ಸಭೆ ನಡೆಸಿ ಅಂತಿಮ ತೀರ್ಮಾನಕ್ಕೆ ಬಂದ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯ ನೌಕರರ ಶೇ.17ರಷ್ಟು ವೇತನ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ ಎಂದರು. ಶೇ.17ರಷ್ಟು ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಮಧ್ಯಂತರ ಪರಿಹಾರ ಘೋಷಣೆ ಮಾಡಿದರು. ಈ ಬೆನ್ನಲ್ಲೆ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಸುದ್ದಿಗೋಷ್ಠಿ ನಡೆಸಿ ಮುಷ್ಕರ ವಾಪಸ್ ಪಡೆದಿರುವುದಾಗಿ ಘೋಷಿಸಿದ್ದಾರೆ